ನಾಳೆ ಯಾವುದೇ ಗೊಂದಲವಿಲ್ಲದೇ ಬೆಂಗಳೂರು ಬಂದ್ ಆಗಲಿದೆ…
ನಾಳೆ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆದೇಶ ಮಾಡಿದ ಡಿಸಿ ಕೆ ಎ ದಯಾನಂದ ಅವರು ಆದೇಶ ಮಾಡಿದ್ದಾರೆ..
ಕಾನೂನು ವಿದ್ಯಾಲಯದ ಪರೀಕ್ಷೇಗಳನ್ನು ಕೂಡ ಮೂಂದುಡಲಾಗಿದೆ.
ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಈಗಾಗಲೇ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಮಂಗಳವಾರ ಬೆಂಗಳೂರು ಸಂಪೂರ್ಣ ಬಂದ್ ಕರೆ ನೀಡಲಾಗಿದೆ. ಅಲ್ಲದೆ ಶುಕ್ರವಾರ ರಾಜ್ಯ ಬಂದ್ ಗೂ ಕರೆ ನೀಡಲಾಗಿದೆ..
ಬೆಂಗಳೂರು: ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಈಗಾಗಲೇ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಮಂಗಳವಾರ ಬೆಂಗಳೂರು ಸಂಪೂರ್ಣ ಬಂದ್ ಕರೆ ನೀಡಲಾಗಿದೆ
ಅಲ್ಲದೆ ಶುಕ್ರವಾರ ರಾಜ್ಯ ಬಂದ್ ಗೂ ಕರೆ ನೀಡಲಾಗಿದೆ.
ನಾಳೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರು ಬಂದ್ಗೆ ಕರೆ ನೀಡಲಾಗಿದ್ದು, ಹಲವು ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ.
ಪಿಎಂ ಗೆ ಎಚ್.ಡಿ ದೇವೇಗೌಡ ಪತ್ರ ಬಂದ್ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆ, ರಕ್ಷಣೆ ದೃಷ್ಟಿಯಿಂದ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಬೆಂಗಳೂರಿನ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಈ ಕುರಿತಾಗಿ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಎಲ್ಕೆಜಿಯಿಂದ 10ನೇ ತರಗತಿವರೆಗಿನ ಶಾಲೆಗಳಿಗೆ ರಜೆ ನೀಡಲಾಗಿದೆ.