ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿಗೆ ಹೃದಯಘಾತ!!9 ನೇ ತರಗತಿ ವಿದ್ಯಾರ್ಥಿ ಸಾವು..
ಕಂಬನಿ ಮಿಡಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ..
ಬಾಗಲಕೋಟೆ: ಪರೀಕ್ಷೆ ಬರೆಯುವ ವೇಳೆ ಹಠಾತ್ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ವರದಿಯಾಗಿದೆ..
ಶಾಲೆಯಲ್ಲಿ ಅರ್ಧವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ 9ನೇ ತರಗತಿ ವಿದ್ಯಾರ್ಥಿ ರಾಹುಲ್ಗೆ ಪರೀಕ್ಷೆ ಬರೆಯುವ ವೇಳೆ ಹಠಾತ್ ಹೃದಯಾಘಾತ ಸಂಭವಿಸಿದೆ.
ಕೂಡಲೇ ಶಾಲೆಯ ಆಡಳಿತ ಮಂಡಳಿ ಬಾಲಕನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ರಾಹುಲ್ ಕೋಲಕಾರ (15) ಎಂದು ತಿಳಿಸಲಾಗಿದ್ದು, ವಿದ್ಯಾರ್ಥಿ ಹುಲ್ಯಾಳ ಗ್ರಾಮದ ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ವರದಿ ತಿಳಿಸಿದೆ.