ಬೆಂ. ಗ್ರಾ. ಜಿಲ್ಲೆ: ನೂತನ ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಗ್ರಾಮೀಣ ಶಿಕ್ಷಕರ ಸಂಘದಿಂದ ಶುಭಕೋರಿಕೆ..
ಬೆಂಗಳೂರು ಗ್ರಾಮಾಂತರ ಜಿಲ್ಲಾ ನೂತನ ಉಪನಿರ್ದೇಶಕರಾಗಿ ವರ್ಗಾವಣೆಗೊಂಡು ಅಧಿಕಾರ ವಹಿಸಿಕೊಂಡ ಕೃಷ್ಣಮೂರ್ತಿ ಅವರನ್ನು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪ್ರಮುಖ ಪದಾಧಿಕಾರಿಗಳು ಸನ್ಮಾನಿಸಿ ಶುಭಕೋರಿದರು.
ಮುಖ್ಯ ಶಿಕ್ಷಕರ ಭಡ್ತಿ, ವರ್ಗಾವಣೆ ಸಮಸ್ಯೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಜಿಲ್ಲಾ ನೂತನ ಉಪನಿರ್ದೇಶಕರೊಂದಿಗೆ ಚರ್ಚಿಸಲಾಯಿತು ಎಂದು ರಾಜ್ಯ ಉಪಾಧ್ಯಕ್ಷ ಎಂ. ಆರ್.ಮಲ್ಲಿಕಾರ್ಜುನಯ್ಯ ತಿಳಿಸಿದರು.
ನೂತನ ಜಿಲ್ಲಾ ಉಪನಿರ್ದೇಶಕರಾದ ಕೃಷ್ಣಮೂರ್ತಿ ಅವರು ಮಾತನಾಡಿ ತಾನು ಈ ಹಿಂದೆ ಗೌರಿಬಿದನೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ವಿವಿಧ ಹಂತದ ಅಧಿಕಾರಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಕಾರಣ ಶಾಲೆ ಮತ್ತು ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದೆ ಎಂದು ಅನುಭವ ಹಂಚಿಕೊಂಡ ಅವರು ಇಲಾಖೆ ಹಾಗೂ ಶಿಕ್ಷಕರ ಸ್ನೇಹಿಯಾಗಿ ಕೆಲಸ ನಿರ್ವಹಿಸಿದ ಒಂದಿಷ್ಟು ಸಂತೃಪ್ತಿ ತನಗಿದ್ದು ಇದುವರೆಗಿನ ವೃತ್ತಿ ಅನುಭವದೊಂದಿಗೆ ಇಲಾಖೆಯ ಧೆಯೋದ್ದೇಶಗಳಿಗೆ ಬದ್ಧನಾಗಿ ಕಾರ್ಯ ನಿರ್ವಹಿಸುವ ಜೊತೆಗೆ ಇಲಾಖೆ, ಶಾಲೆ, ಶಿಕ್ಷಣ ಮತ್ತು ಶಿಕ್ಷಕರ ಕೊಂಡಿಯಾಗಿ ಕೆಲಸ ನಿರ್ವಹಿಸುವುದಾಗಿ ತಿಳಿಸಿದ ಅವರು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸೇರಿದಂತೆ ಇಲಾಖೆ ಮತ್ತು ಇತರೆ ಸಂಘ ಸಂಸ್ಥೆಗಳ ಆಶೋತ್ತರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಜೊತೆಗೆ ಶಿಕ್ಷಕ ಮತ್ತು ಶಿಕ್ಷಣ ಸೇತುವೆಯಾಗಿ ನಿಂತು ಇಲಾಖಾ ಆದೇಶಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸಲು ಬದ್ಧನಾಗಿರುವೆ ಎಂದು ಭರವಸೆ ನೀಡಿದರು.
ಸಂದರ್ಭದಲ್ಲಿ ಕ.ರಾ.ಪ್ರಾ.ಶಾ.ಶಿ.ಸಂ. ಮಾಜಿ ಅಧ್ಯಕ್ಷ ಹಾಗೂ ಗ್ರಾ.ಪ್ರಾ.ಶಾ.ಶಿ.ಸಂ. ಮಾರ್ಗದರ್ಶಕರಾದ ಜಿ.ವಿ ಕುಮಾರ್, ಶಿವಕುಮಾರ್. ಬಿ, ಸ.ನೌ.ಸಂ.ಜಿಲ್ಲಾ ಉಪಾಧ್ಯಕ್ಷ ಕೆ.ಎನ್.ನಾಗೇಶ್, ಕ.ಸ.ಗ್ರಾ.ಪ್ರಾ.ಶಾ.ಶಿ.ಸಂ.ಬೆಂ.ಗ್ರಾ. ಜಿಲ್ಲಾಧ್ಯಕ್ಷ ಪರಮೇಶ್ವರಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ. ಜಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಮಚಂದ್ರಯ್ಯ, ವಿ.ಐ.ಎನ್.ಎಸ್.ಎಸ್. ಹಾಲಿ ಅಧ್ಯಕ್ಷ ದೇವರಾಜು, ಮಾಜಿ ಅಧ್ಯಕ್ಷ ಪ್ರಕಾಶ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.