ಶ್ರೀಯುತ ಸಿದ್ದರಾಮಯ್ಯರವರು, ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ, ವಿಧಾನಸೌಧ, ಬೆಂಗಳೂರು,
ಮಾನ್ಯರೆ,
ವಿಷಯ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2023ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ. ಉಲ್ಲೇಖ: ಕೇಂದ್ರ ಸರ್ಕಾರದ ಆದೇಶ ಸಂ:1/4/2023-E-II (B) ದಿನಾಂಕ: 20-10-2023 ಸೂಚಿತ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ.
ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2023ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 4%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.
ಆದ್ದರಿಂದ ತಾವುಗಳು ದಯಮಾಡಿ ಉಲ್ಲೇಖಿತ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ದಿನಾಂಕ: 01-07-2023 ರಿಂದ ಪೂರ್ವಾನ್ವಯವಾಗುವಂತೆ ಶೇ. 4%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಆರ್ಥಿಕ ಇಲಾಖೆಗೆ ನಿರ್ದೆಶನ ನೀಡಲು ತಮ್ಮಲ್ಲಿ ಕೋರಿದೆ ಎಂದು ಸಿ.ಎಸ್.ಷಡಕ್ಷರಿಯವರು ಪತ್ರದ ಮೂಲಕ ಮಾನ್ಯ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ..