ಬೆಂಗಳೂರು: ರಾಜ್ಯ ಸರ್ಕಾರ ಇವತ್ತು ನಡೆದ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ನಡೆದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಕುರಿತಂತೆ ಯಾವುದೇ ಚರ್ಚೆ ನಡೆದಿಲ್ಲ. ಹಾಗೂ ದಸರಾ ರಜೆ ವಿಸ್ತರಣೆ ಆಗುವುದಲ್ಲಿ ಎಂಬ ಮಾಹಿತಿ ದೊರೆತಿದೆ..
ರಾಜ್ಯದ ಶಿಕ್ಷಕ ಸಂಘಟನೆಗಳು ಮಾನ್ಯ ಮುಖ್ಯ ಮಂತ್ರಿಗಳಿಗೆ ಹಾಗೂ ಡಿಸಿಎಮ್ ಅವರಿಗೆ ಅಕ್ಟೋಬರ್31 ರವರಗೆ ದಸರಾ ರಜೆ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು..
ಆದ್ರೆ ಸರ್ಕಾರ ಮಾತ್ರ ದಸರಾ ರಜೆ ವಿಸ್ತರಣೆ ಮಾಡುವುದಿಲ್ಲ ಎಂದು ತಿಳಿದು ಬಂದಿದೆ..ಮಾನ್ಯ ಶಿಕ್ಷಣ ಸಚಿವವರಾದ ಮಧು ಬಂಗಾರಪ್ಪ ಅವರು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು…
ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾನ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರು ವಿದೇಶ ಪ್ರವಾಸದಿಂದ ಈಗಷ್ಟೇ ಮರಳಿ ಸ್ವದೇಶಕ್ಕೆ ಮರಳಿದ್ದಾರೆ..ಇವರ ಮೇಲೆ ಕೂಡ ರಾಜ್ಯದ ಶಿಕ್ಷಕರು ಅಪಾರ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಆದ್ರೆ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡೊಣ..ಬಿಜೆಪಿ ಸರ್ಕಾರ ಇದ್ದಾಗಲೂ ಸಹ ಸಚಿವರು,ಸಿಎಮ್ ಅವರು ಇವರ ಮಾತನ್ನು ಕೇಳಿಲ್ಲ ಎಂಬುದನ್ನು ಇಲ್ಲಿ ಸ್ಮರಸಬಹುದು…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು
• ಜೆ.ಎನ್.ಯು ನಲ್ಲಿ ಕನ್ನಡ ಅಧ್ಯಯನ ಪೀಠವನ್ನು ಮುಖ್ಯಮಂತ್ರಿಯವರ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿತ್ತು. ಅದರ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದು ಕ್ರಮ ಕೈಗೊಳ್ಳುವಂತೆ ಸೂಚಿಸಿದರು*
• ವಿವಿಧ ವಿಶ್ವವಿದ್ಯಾಲಯಗಳ ಕಾರ್ಯಚಟುವಟಿಕೆಗಳು ಭಿನ್ನ ಅವಧಿಗೆ ನಡೆಯುವುದರಿಂದ ಅಭ್ಯರ್ಥಿಗಳಿಗೆ ಅನಾನುಕೂಲವಾಗುವುದರಿಂದ, ಏಕರೂಪದ ಕ್ಯಾಲೆಂಡರ್ ಆಫ್ ಇವೆಂಟ್ಸ್ ಜಾರಿಗೊಳಿಸಲು ಸೂಚಿಸಿದರು. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಪರಿಷತ್ತು ಕಾರ್ಯನಿರತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
• ಶಿಕ್ಷಣ ಕ್ಷೇತ್ರದ ಗುಣಮಟ್ಟ ಕಾಯ್ದುಕೊಳ್ಳಲು ಬೋಧಕ ಸಿಬ್ಬಂದಿ ನೇಮಕ ಅತಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್ಲಾಗ್ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡುವಂತೆ ಹಾಗೂ ನಂತರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸುವಂತೆ ಹಣಕಾಸು ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು.
• ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಲ್.ಎಂ.ಎಸ್. ವ್ಯವಸ್ಥೆ ಜಾರಿಗೆ ಬಂದಿರುವುದರಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಲ್ಯಾಪ್ಟಾಪ್ ವಿತರಿಸುವ ಬಗ್ಗೆ, ಪಿ.ಎಚ್.ಡಿ. ವಿದ್ಯಾರ್ಥಿಗಳಿಗೆ ಸ್ಟೈಫೆಂಡ್ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
• ಮೈಸೂರು ಮಹಾರಾಣಿ ಆರ್ಟ್ಸ್ ಕಾಲೇಜು ಹಾಸ್ಟೆಲ್ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದರು.
*ಈಗಾಗಲೇ ಇಲಾಖೆಯ ಬಳಿ 47 ಕೋಟಿ ರೂ. ಲಭ್ಯವಿದ್ದು ಮುಂದಿನ ವರ್ಷದ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
• ಇದಲ್ಲದೆ ಶಿಥಿಲಾವಸ್ಥೆಯಲ್ಲಿರುವ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ/ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ದಸರಾ ಸಂದರ್ಭದಲ್ಲಿ ತಾವು ಸ್ವತಃ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದರು.
• ಬಹುತೇಕ ಮಕ್ಕಳು ಬಡ ಹಾಗೂ ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದ್ದಾರೆ. ಇವರ ಅನುಕೂಲಕ್ಕಾಗಿ ಸುಸಜ್ಜಿತ ಹಾಸ್ಟೆಲ್ ನಿರ್ಮಿಸುವ ಅಗತ್ಯವಿದೆ. ಈ ಹಾಸ್ಟೆಲ್ ನಿರ್ಮಾಣಕ್ಕೆ ತಮ್ಮ ಹಿಂದಿನ ಅವಧಿಯಲ್ಲಿ ಆಯವ್ಯಯದಲ್ಲಿ ಅನುದಾನ ಘೋಷಿಸಿದ್ದನ್ನು ಸ್ಮರಿಸಿದರು.
• ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡುವಂತೆ ಸೂಚಿಸಿದರು.
• ವಿಶ್ವವಿದ್ಯಾಲಯಗಳು ವಿಭಜನೆಯಾಗಿರುವುದರಿಂದ ಹಳೆಯ 5 ವಿಶ್ವವಿದ್ಯಾಲಯಗಳ ಪಿಂಚಣಿ ವಿತರಣೆ ಸಮಸ್ಯೆ ಕುರಿತು ಚರ್ಚಿಸಲಾಯಿತು.
• ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತಿತರ ವಿಷಯಗಳಲ್ಲಿ ಸುಧಾರಣೆ ತರುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
• ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13169 ವಿದ್ಯಾರ್ಥಿಗಳ ಸಾಮರ್ಥ್ಯದ 224 ವಸತಿ ನಿಲಯಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದೆ ತರುವಂತೆ ಸೂಚಿಸಿದರು.
• ಮುಂದಿನ ವರ್ಷ ಆಯವ್ಯಯ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಗೆ ಮುಂಚಿತವಾಗಿಯೇ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಿ, ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದರು.