ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು, ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ನಿಯಮಗಳು, 1992 ರನ್ನಯ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂತಿಮ ಆಯ್ಕೆಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೆ’ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆಯಬೇಕಾಗುತ್ತದೆ.
ಪ್ರ ಮಾಣ ಪತ್ರ
ಆದರೆ, ಮೀಸಲಾತಿ ಕೋರಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡಾಗಲೂ ಸಿಂಧುತ ಪುಮಾಣ ಪತ್ರ ಸಲ್ಲಿಸುವಂತೆ ಕೆಲವು ನೇಮಕಾತಿ ಪ್ರಾಧಿಕಾರಿಗಳು ಅಭ್ಯರ್ಥಿಗಳಿಗೆ ಸೂಚಿಸುತ್ತಿವೆ. ಇದರಿಂದ ಅಂತಿಮ ಆಯ್ಕೆಪಟ್ಟಿಯಲ್ಲಿ ಮೆರಿಟ್ ಆಧಾರದಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಯಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅನಾವಶ್ಯಕ ತೊಂದರೆಯಾಗುತ್ತಿದೆ.
ಆದ್ದರಿಂದ, ಮೀಸಲಾತಿ ಕೋರಿ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಮೀಸಲಾತಿಯಿಂದ ಯಾವುದೇ ರಿಯಾಯತಿ ಪಡೆಯದೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸದಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಮರಿಗೆ ಸೂಕ್ತ ನಿರ್ದೇಶನ ನೀಡಲು ಸೂಚಿಸಿದೆ ಎಂದು ಮಾನ್ಯ ಮುಖ್ಯ ಮಂತ್ರಿಗಳು ಆದೇಶ ಮಾಡಿರುತ್ತಾರೆ..
ಸದರಿ ಆದೇಶ ಮಾಡಿರುವ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಹಾಗೂ ಘನ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾದ್ಯಕ್ಷರಾದ ಅಶೋಕ ಸಜ್ಜನ ಸೇರಿದಂತೆ ಸಂಘದ ಸರ್ವ ಹಂತದ ಪದಾಧಿಕಾರಿಗಳು ಸ್ವಾಗತಿಸಿದ್ದಾರೆ…