ಶಾಲಾ ಶಿಕ್ಷಕನಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲಿಸಿ ಕಾಮುಕ ಶಿಕ್ಷಕ ಬಂಧನ
ದಾವಣಗೆರೆ: 7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಅಪ್ರಾಪ್ತೆ ಮೇಲೆ ಕಾಮುಕ ಶಿಕ್ಷಕ ನಿರಂತರ ಅತ್ಯಾಚಾರ ಎಸಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾದಾಗ ಪ್ರಕರಣ ಬೆಳಕಿಗೆ ಬಂದಿದೆ.
ದಾವಣಗೆರೆ ನಗರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಬಾಲಕಿ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಯಾರಿಗೂ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಆದ್ರೆ ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಅತ್ಯಾಚಾರವಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಪೋಷಕರು ಕಾಮುಕ ಶಿಕ್ಷಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಷಕರ ದೂರಿನನ್ವಯ ಪೋಕ್ಸೋ ಪ್ರಕರಣದ ಅಡಿ ಕೇಸ್ ದಾಖಲಿಸಿದ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ