ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಓಪಿಎಸ್ ಜಾರಿ ಮಾಡುವಂತೆ ಪ್ರತಿಭಟನೆ,ಹೋರಾಟವನ್ನು ಮಾಡಿದ್ದಾರೆ.ಸಿಎಮ್ ಸೇರಿದಂತೆ ಸಚಿವರಿಗೆ,ಶಾಸಕರಿಗೆ ಮನವಿ ಕೂಡ ಮಾಡಿದ್ದಾರೆ.ಇದೀಗ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೀಡಿರುವ ಮನವಿಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ..
ಮಾನ್ಯರೆ..
ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ಇವರು, ದಿನಾಂಕ:01.04.2006ಕ್ಕಿಂತ ಮೊದಲು ಅಧಿಸೂಚನ ಹೊರಡಿಸಿ, ಸೇವೆಗೆ ಸೇರಿದ ಶಿಕ್ಷಕರಿಗೆ ನೂತನ ಪಿಂಚಣಿ ಯೋಜನೆಯನ್ನು (NPS) ಜಾರಿಗೊಳಿಸಲಾಗಿದೆ.
ಇದರಿಂದ ಸರ್ಕಾರಿ ಸೇವೆಗೆ ಸೇರಿದ ಶಿಕ್ಷಕರಿಗೆ ಸಂಧ್ಯಾ ಕಾಲದ ಬದುಕಿಗೆ ಭದ್ರತೆಯನ್ನು ತಂದುಕೊಡುವ ನಿಟ್ಟಿನಲ್ಲಿ ಮತ್ತು ನೂತನ ಪಿಂಚಣಿ ಯೋಜನೆಯಡಿ ನಿವೃತ್ತಿ ಹೊಂದಿ, ಕನಿಷ್ಠ ಪಿಂಚಣಿಯು ಇಲ್ಲದೆ, ದಯಾನೀಯ ಜೀವನ ನಡೆಸುತ್ತಿರುವ ಶಿಕ್ಷಕರ ಬದುಕಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ NPS ಯೋಜನೆಯನ್ನು ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಕೋರಿ ಮನವಿ ಸಲ್ಲಿಸಿರುತ್ತಾರೆ. ಸದರಿ ಮನವಿಯನ್ನು ಲಗತ್ತಿಸಿದೆ.
ಸದರಿಯವರ ಕೋರಿಕೆಯನ್ನು ಪರಿಶೀಲಿಸಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ತಮ್ಮನ್ನು ಕೋರಲು ಮಾನ್ಯ ಮುಖ್ಯಮಂತ್ರಿಯವರಿಂದ ನಿರ್ದೇಶಿತನಾಗಿದ್ದೇನೆ ಎಂದು ಮುಖ್ಯ ಮಂತ್ರಿಯವರ ಜಂಟಿ ಕಾರ್ಯದರ್ಶಿ ಎಂ ರಾಮಯ್ಯ ಪತ್ರ ಅವರು ಸರ್ಕಾರದ ಅಪರ ಕಾರ್ಯದರ್ಶಿಯವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿದ್ದಾರೆ..