ಶಿಕ್ಷಣ ಅದಾಲತ್ ಕಾರ್ಯಕ್ರಮ
ಸವದತ್ತಿ: ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ದಿನಾಂಕ: 04 -11- 2023 ರಂದು ಶಾಲಾ ಶಿಕ್ಷಣ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅದಾಲತ್ ನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ದಂಡಿನರವರ ನೇತೃತ್ವದಲ್ಲಿ ಸವದತ್ತಿ ತಾಲೂಕಿನ ಶಿಕ್ಷಕರ 22 ಅರ್ಜಿಗಳನ್ನು ಇತ್ಯರ್ಥಪಡಿಸಿ ಸೂಕ್ತ ಕ್ರಮ ವಹಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾತನಾಡಿ “ಇಲಾಖೆ ಆಶಯದಂತೆ ಶಿಕ್ಷಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ.ಎನ್.ಬ್ಯಾಳಿ ಸವದತ್ತಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ ಕುರಿ , ಜಿಲ್ಲಾ ಉಪಾಧ್ಯಕ್ಷ ರಾದ ಎಮ್. ಎಫ್. ಸಿದ್ದನಗೌಡರ ಸವದತ್ತಿ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ , ಅಧ್ಯಕ್ಷರಾದ ಸುಧೀರ್ ಎಸ್.ವಾಗೇರಿ . ಪತ್ರಾಂಕಿತ ವ್ಯವಸ್ಥಾಪಕರಾದ ಐ. ಎಂ. ಮಕಾನದಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.ಕಾರ್ಯಕ್ರಮದ ಪ್ರಾರಂಭದಲ್ಲಿ ಶಿಕ್ಷಣ ಸಂಯೋಜಕರಾದ ಜಿ.ಎಂ.ಕರಾಳೆ ಸ್ವಾಗತಿಸಿದರು. ಎಂ ಡಿ ಹುದ್ಧಾರ ನಿರೂಪಿಸಿದರು ಕೊನೆಗೆ ಬಿ ಎಂ ಮಾಳಗಿ ವಂದಿಸಿದರು.