ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮೇಲೆ ಬಹಳಷ್ಟು ನೀರಿಕ್ಷೆ ಇಟ್ಟುಕೊಂಡಿದ್ದರು.
7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ, ಆಯೋಗದ ಕಾಲಾವಧಿಯನ್ನು ದಿನಾಂಕ:15-03-2024 ರವರೆಗೆ ವಿಸ್ತರಿಸಿ ಆದೇಶಿಸಿದೆ.
ಸರ್ಕಾರ ಮದ್ಯಂತರ ಪರಿಹಾರ ನೀಡಬೆಕೆಂಬುದು ನೌಕರರ ಒತ್ತಾಯವಾಗಿದೆ.
ಬೆಂಗಳೂರು:
ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ: (1)ರ ದಿನಾಂಕ:19-11-2022ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿರುತ್ತದೆ. ಕ್ರಮ ಸಂಖ್ಯೆ (4)ರಲ್ಲಿ ಓದಲಾದ ದಿನಾಂಕ:15-05-2023ರ ಸರ್ಕಾರಿ ಆದೇಶದಲ್ಲಿ ನೇ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು ವಿಸ್ತರಿಸಲಾಗಿರುತ್ತದೆ. ಪ್ರಸ್ತುತ 7ನೇ ರಾಜ್ಯ ವೇತನ ಆಯೋಗದ ಕಾಲಾವಧಿಯು ದಿನಾಂಕ:18-11-2023ಕ್ಕೆ ಕೊನೆಗೊಳ್ಳುತ್ತಿದ್ದು, ಸರ್ಕಾರವು ಈ ಕೆಳಕಂಡಂತೆ ಆದೇಶವನ್ನು ಹೊರಡಿಸಿದ.
ಸರ್ಕಾರಿ ಆದೇಶ ಸಂಖ್ಯೆ: ಆಇ 45 ಎಸ್.ಆರ್.ಪಿ 2022, ಬೆಂಗಳೂರು, ದಿನಾಂಕ: 06ನೇ ನವೆಂಬರ್ 2023.
7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಅನುಕೂಲವಾಗುವಂತೆ, ಆಯೋಗದ ಕಾಲಾವಧಿಯನ್ನು ದಿನಾಂಕ:15-03-2024 ರವರೆಗೆ ವಿಸ್ತರಿಸಿ ಆದೇಶಿಸಿದೆ.