ಮಕ್ಕಳ ದಿನಾಚರಣೆಯ ನಿಮಿತ್ತ ಬೆಟಸೂರಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ…
ಸವದತ್ತಿ : ದೇಶದ ಪ್ರಥಮ ಪ್ರಧಾನ ಮಂತ್ರಿಗಳಾಗಿದ್ದ ದಿವಂಗತ ಶ್ರೀ ಪಂಡಿತ್ ಜವಾಹರಲಾಲ ನೆಹರು ಅವರ ಜನ್ಮದಿನಾಚರಣೆಯನ್ನು ದೇಶಾದ್ಯಂತ ನವೆಂಬರ್ 14 ರಂದು ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತದೆ. ಪ್ರಯುಕ್ತ ಸವದತ್ತಿ ತಾಲೂಕಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಬೆಟಸೂರಿನಲ್ಲಿ ಮಕ್ಕಳ ದಿನಾಚರಣೆ ನಿಮಿತ್ತ ಎರಡನೇ ಬಾರಿಗೆ ಶಾಲಾ ಪ್ರತಿಭಾ ಕಾರಂಜಿಯನ್ನು ದಿನಾಂಕ 16.11.2023 ಮತ್ತು 17.11.2023 ರವರೆಗೆ ಹಮ್ಮಿಕೊಳ್ಳಲಾಗಿದೆ.
ಶಾಲೆಯಲ್ಲಿ ಒಂದರಿಂದ ಎಂಟನೇ ತರಗತಿಯವರೆಗೆ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದು. ಈ ಎಲ್ಲಾ ವಿದ್ಯಾರ್ಥಿಗಳಿಗಾಗಿ ಪ್ರಮುಖ ಮನೋರಂಜನಾ ಹಾಗೂ ಜ್ಞಾನಾರ್ಜನೆಯ ಉದ್ದೇಶದಿಂದ ಎರಡು ಸ್ಪರ್ಧಾ ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಒಳಾಂಗಣ ಸ್ಪರ್ಧೆಗಳಲ್ಲಿ ಚಿತ್ರಕಲೆ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಗಾಯನ ಸ್ಪರ್ಧೆ ಹಾಗೂ ಹೊರಾಂಗಣ ಸ್ಪರ್ಧೆಗಳಲ್ಲಿ ಮ್ಯೂಸಿಕಲ್ ಚೇರ್, ಸ್ಲೋ ಸೈಕಲ್ ರೈಡಿಂಗ್, ಲೆಮೆನ್ ಸ್ಪೂನ್ ಸ್ಪರ್ಧೆಗಳು ಸೇರಿವೆ. ಈ ಎಲ್ಲಾ ಸ್ಪರ್ಧೆಗಳಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಬಹಳ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದು. ಶಾಲೆಯ ಎಲ್ಲಾ ಶಿಕ್ಷಕರು ನಿರ್ಣಾಯಕರಾಗಿ ಹಾಗೂ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ . ವಿಜೇತರಾದ ವಿದ್ಯಾರ್ಥಿಗಳಿಗೆ ದಿನಾಂಕ 18.11.2023 ರಂದು ನಡೆಯುವ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ವತಿಯಿಂದ ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತದೆ. ಎಂದು ಶಾಲೆಯ ಶಿಕ್ಷಕರಾದ ಬೆಳವಡಿಯವರು ತಿಳಿಸಿರುವರು.
ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಲು ಈ ವಿಭಿನ್ನ ಕಾರ್ಯ ಹಮ್ಮಿಕೊಳ್ಳುತ್ತಿರುವುದು ಕಳೆದ ವರ್ಷದಿಂದ ಆರಂಭಿಸಲಾಗಿದ್ದು ಇದು ಎರಡನೇ ವರುಷದ ಕಾರ್ಯ ಕ್ರಮ ಎಂದು ಅವರು ಹೇಳಿರುವರು