ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವಂದಿತಾ ಶರ್ಮಾ ಅವರ ಅವಧಿ ನ.30ಕ್ಕೆ ಮುಕ್ತಾಯಗೊಳ್ಳುತ್ತಿದೆ.
ಈ ಹಿನ್ನಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 1986ನೇ ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದೆ.