ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ನಡೆದಿದ್ದಂತ ಭ್ರೂಣ ಹತ್ಯೆ ಪ್ರಕರಣ ಸಂಬಂಧ, ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಮೈಸೂರು ಜಿಲ್ಲೆಯ ಈ ಹಿಂದಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ರಂದೀಪ್ ಅವರು ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲೆಯ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿ.ಪಿ ಹಾಗೂ ಹಾಲಿ ಮೈಸೂರು ತಾಲೂಕಿನ ತಾಲೂಕು ಆರೋಗ್ಯ ಅಧಿಕಾರಿ ಡಾ.ರಾಜೇಶ್ವರಿ.ಎಸ್ ಅವರುಗಳ ವಿರುದ್ಧ ಕರ್ತವ್ಯಲೋಪ ಆರೋಪದ ಬಗ್ಗೆ ಶಿಸ್ತುಕ್ರಮ ಬಾಕಿ ಇರಿಸಿ, ಈ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾತನುಗೊಳಿಸಿ ಆದೇಶಿಸಿದ್ದಾರೆ.
ಈ ಮೂಲಕ ಭ್ರೂಣಹತ್ಯೆ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ.