ಉಗರಗೊಳದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ..
ಉಗರಗೋಳ(ತಾ.ಸವದತ್ತಿ) : ಶಿವಯೋಗದಲ್ಲಿ ಉತ್ತುಂಗ ಸಾಧನೆಗೈದ ಸವದತ್ತಿ ತಾಲೂಕು ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ತೀಕ ಮಾಸದ ಕೊನೆಯ ಸೋಮವಾರ (ಡಿಸೆಂಬರ್-11 ರಂದು) ಜರುಗಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗುವವು. ನಂತರ ಮುಂಜಾನೆ 9 ಗಂಟೆಗೆ ಶ್ರೀಮಠದಿಂದ ಪೂಜ್ಯ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವವು 108 ಪೂರ್ಣ ಕುಂಭಗಳು ಸೇರಿದಂತೆ ವಿವಿಧ ಜನಪದ ವಾದ್ಯಮೇಳಗಳೊಂದಿಗೆ ಉಗರಗೋಳ ಗ್ರಾಮದಲ್ಲಿ ನಡೆಯಲಿದ್ದು, ನಂತರ ಮಹಾಪ್ರಸಾದದ ದಾಸೋಹ ಜರುಗಲಿದೆ.
ಲಕ್ಷ ದೀಪೋತ್ಸವ : ಇದೇ ದಿನ ಸಂಜೆ 5-30 ಗಂಟೆಗೆ ನಡೆಯುವ ಧರ್ಮ ಜಾಗೃತಿ ಸಮಾರಂಭಲ್ಲಿ ಹೂಲಿ ಸಾಂಬಯ್ಯನವರಮಠದ ಶ್ರೀಉಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಉಗರಗೋಳ ನಿರ್ವಾಣೇಶ್ವರಮಠದ ಶ್ರೀಮಹಾಂತ ಸ್ವಾಮೀಜಿ, ಬೈಲಹೊಂಗಲ ಮೂರುಸಾವಿರಮಠದ ಪ್ರಭು ನೀಲಕಂಠ ಸ್ವಾಮೀಜಿ ಮತ್ತು ರಾಮಾರೂಢಮಠದ ಶ್ರೀಬ್ರಹ್ಮಾರೂಢ ಸ್ವಾಮೀಜಿ ಸಾನ್ನಿಧ್ಯವಹಿಸುವರು.
ಸವದತ್ತಿ ಶಾಸಕ ವಿಶ್ವಾಸ ವೈದ್ಯ ಲಕ್ಷ ದೀಪೋತ್ಸವ ಉದ್ಘಾಟಿಸಲಿದ್ದು, ನಿವೃತ್ತ ಎ.ಸಿ.ಪಿ. ಜಿ.ಆರ್. ಹಿರೇಮಠ ಅಧ್ಯಕ್ಷತೆವಹಿಸುವರು.
ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಸಯ್ಯ ಹಿರೇಮಠ, ಸವದತ್ತಿಯ ಯುವ ಧುರೀಣ ವಿರೂಪಾಕ್ಷ ಮಾಮನಿ, ಉಗರಗೋಳ ಗ್ರಾ.ಪಂ. ಅಧ್ಯಕ್ಷ ಮಂಜುನಾಥ ಕಾಳಪ್ಪನವರ, ಉಪಾಧ್ಯಕ್ಷೆ ರೇಣವ್ವ ಸಿದ್ದಕ್ಕನವರ, ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಿ. ಬಿ. ಮಹೇಶ್, ಸವದತ್ತಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಮೈತ್ರಾದೇವಿ ವಸ್ತ್ರದ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಸವದತ್ತಿ, ಹುಕ್ಕೇರಿ, ಉಗರಗೋಳ, ಹರ್ಲಾಪೂರ, ಹಂಚಿನಾಳ, ಮುನವಳ್ಳಿ ಗ್ರಾವiಗಳ ವಿವಿಧ ಕ್ಷೇತ್ರಗಳ ಗಣ್ಯರು, ರೈತ ನಾಯಕರು, ಯುವ ಧುರೀಣರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಗುರುರಕ್ಷೆ ಗೌರವ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಪತ್ರಕರ್ತರಾದ ಮಲ್ಲನಗೌಡ ಪಾಟೀಲ, ಸುಧೀರ ದೊಡಮನಿ, ನಿವೃತ್ತ ಅಧ್ಯಾಪಕರುಗಳಾದ ವೈ.ಆರ್. ಚೆನ್ನಪ್ಪಗೌಡರ, ಎಸ್.ಪಿ. ನರಗುಂದ, ಎಸ್.ಎಲ್. ಅಂಗಡಿ ಹಾಗೂ ರೈತ ಮಹಿಳೆ ಯಲ್ಲಮ್ಮ ಗಂದಿಗವಾಡ ಅವರಿಗೆ ಗುರುರಕ್ಷೆಯ ಗೌರವ ನೀಡಲಾಗುವುದು. 2022-23 ರಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಅಧಿಕ ಅಂಕಗಳನ್ನು ಸಂಪಾದಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ವಿವಿಧ ಜನಪದ ಕಲಾತಂಡಗಳು ಪಾಲ್ಗೊಳ್ಳುತ್ತಿದ್ದು, ಸಂಗೀತ ಅಧ್ಯಾಪಕ ಡಾ.ಅರ್ಜುನ ವಠಾರ ಮತ್ತು ಡಾ.ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯ ಕಲಾ ಬಳಗದಿಂದ ವಿವಿಧ ಸಂಗೀತ ಕಾರ್ಯಕ್ರಮಗಳು ಜರುಗಲಿವೆ. ಈ ಧರ್ಮ ಸಮಾರಂಭದಲ್ಲಿ ಎಲ್ಲರೂ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಕೃಪಾಕಾರುಣ್ಯಕ್ಕೆ ಪಾತ್ರರಾಗಬೇಕೆಂದು ಶ್ರೀಮಠದ ಆಡಳಿತ ಮಂಡಳಿಯ ಸಿ.ಇ.ಓ., ನಿವೃತ್ತ ಕೆ.ಎ.ಎಸ್. ಅಧಿಕಾರಿ ಎಂ. ಆರ್. ಹಿರೇಮಠ ಮಾಧ್ಯಮ ಪ್ರಕಟಣೆಯಲ್ಲಿ ಕೋರಿದ್ದಾರೆ.