2023_2024 ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯ ಮಾಹಿತಿ..
ಶಿಕ್ಷಕರ ಗಮನಕ್ಕೆ
ಬೆಂಗಳೂರು : 2023-24ನೇ ಸಾಲಿನಲ್ಲಿ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿಗೆ ಪೂರಕವಾಗಿ ಅರ್ಹ ಹಿರಿಯ/ಮುಖ್ಯ ಶಿಕ್ಷಕರಿಗೆ ವಲಯ ವರ್ಗಾವಣೆಯನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಶಿಕ್ಷಕರುಗಳಿಗೆ ಮುಖ್ಯ ಶಿಕ್ಷಕರ(HM) ವೃಂದಕ್ಕೆ ಹಾಗೂ ಮುಖ್ಯ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿ ಉಲ್ಲೇಖಿತ-1ರಲ್ಲಿ ಬಡ್ತಿ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಶಿಕ್ಷಕರ ವರ್ಗಾವಣಾ ನಿಯಂತ್ರಣ ಕಾಯ್ದೆ-2020ರ ಸೆಕ್ಷನ್-3 ಪ್ರಕಾರ ‘ಸಿ’ ವಲಯದಲ್ಲಿನ ಶಾಲೆಗಳಲ್ಲಿ ಸ್ಥಳಾವಕಾಶ ಕಲ್ಪಿಸುವ ದೃಷ್ಟಿಯಿಂದ ‘ಸಿ’ ವಲಯದ ಮುಖ್ಯ ಶಿಕ್ಷಕರ/ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳನ್ನು ಸಂಬಂಧಿಸಿದ ಶಾಲೆಗಳಲ್ಲಿ ತೆರವುಗೊಳಿಸಬೇಕಿದೆ.
ಈ ಹಿನ್ನೆಲೆಯಲ್ಲಿ ದಿನಾಂಕ: 30/01/2024 ರಂದು ಆಯಾ ಜಿಲ್ಲಾ ಹಂತದಲ್ಲಿ ವಲಯ ವರ್ಗಾವಣಾ ಕೌನ್ಸಿಲಿಂಗ್ನ್ನು ನಿಗಧಿಪಡಿಸಲಾಗಿತ್ತು. ಆದರೆ ವಲಯ ವರ್ಗವಣಾ ಕೌನ್ಸಿಲಿಂಗ್ನ್ನು ಆನ್ಲೈನ್ ಮೂಲಕ ನಿರ್ವಹಿಸಲು ಉಪನಿರ್ದೇಶಕರು(ಆಡಳಿತ) ಇವರುಗಳಕೋರಿಕೆಯ ಮೇರೆಗೆ ನಿರ್ಧರಿಸಲಾಗಿರುವುದರಿಂದ ದಿನಾಂಕ: 30/01/2024 ರಂದು ನಡೆಯಬೇಕಾಗಿದ್ದ ವಲಯ ವರ್ಗಾವಣಾ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆಡಳಿತಾತ್ಮಕ ದೃಷ್ಟಿಯಿಂದ ದಿನಾಂಕ: 03/02/2024 ರಂದು ಆನ್ಲೈನ್ ಕೌನ್ಸಿಲಿಂಗ್ ಮೂಲಕ ಆಯಾ ವ್ಯಾಪ್ತಿಯ ಉಪನಿರ್ದೇಶಕರು(ಆಡಳಿತ) ಇವರ ಕಛೇರಿಯಲ್ಲಿ ನಡೆಸಲಾಗುವುದು. ಸಕ್ಷಮ ಪ್ರಾಧಿಕಾರಿಗಳು ಬದಲಾವಣೆಯನ್ನು ಗಮನಿಸಿ ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಗೆ ಎಲ್ಲಾ ಅಗತ್ಯ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳಲು ತಿಳಿಸಿದೆ.