ವಿವಿಧ ಬೇಡಿಕೆಗಳ ಈಡೇರಿಕೆಗೆ ಬೆಂಗಳೂರು ಚಲೋ
ಸ ಮಾ ಹೆ ಮ ಶಾಲೆ ಲಕ್ಷ್ಮೇಶ್ವರ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕ ಘಟಕ ಲಕ್ಷ್ಮೇಶ್ವರ ವತಿಯಿಂದ ಫೆಬ್ರುವರಿ 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಭಾಗವಹಿಸುವ ಸಂಬಂಧ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಇದೇ ಸಂದರ್ಭದಲ್ಲಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಡಿ ಎಚ್ ಪಾಟೀಲ ಮಾತನಾಡಿ, ರಾಜ್ಯದ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು. ಶೇ 40ರಷ್ಟು ಫಿಟ್ ಮೆಂಟ್ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ 1/7/2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಜೊತೆಗೆ ದಿನಾಂಕ 1/4/2006ಕ್ಕಿಂತ ಮೊದಲು ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದು. ರಾಜ್ಯದ ಎನ್ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರ್ನಾಟಕ ರಾಜ್ಯದಲ್ಲೂ ಸಹ ಎನ್ಪಿಎಸ್ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಎಂಬುದು ಸಹ ಪ್ರಮುಖ ಬೇಡಿಕೆಯಾಗಿದೆ.ಹಾಗೂ ಕರ್ನಾಟಕ ರಾಜ್ಯ ನಗದುರಹಿತ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸುವುದು ಎಂದು ಸಹ ಬೇಡಿಕೆ ಇಡಲಾಗಿದೆ ಎಂದು ಹೇಳಿದರು.
ಈ ಒಂದು ಮಹಾ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕಿನ ಸರ್ಕಾರಿ, ಅರೆ ಸರ್ಕಾರಿ ಮತ್ತು ನಿವೃತ್ತ ನೌಕರರರು ಭಾಗವಹಿಸಿ, ನಮ್ಮ ಹಕ್ಕು…. ನೆಮ್ಮದಿಯ ಬದುಕಿಗಾಗಿ…. ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳೋಣ ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಸ ನೌ ಸಂಘದ ಅಧ್ಯಕ್ಷರಾದ ಡಿ ಎಚ್ ಪಾಟೀಲ, ಪ್ರಧಾನ ಕಾರ್ಯದರ್ಶಿ ಎಮ್ ಎ ನದಾಫ, ಪ್ರಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ ಎಸ್ ಹರ್ಲಾಪೂರ,ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ನೇಕಾರ, ಸರ್ವ ಸಂಘಗಳ ಗೌರವಾಧ್ಯಕ್ಷರಾದ ಬಿ ಎಮ್ ಕುಂಬಾರ, ಎನ್ ಪಿ ಎಸ್ ನೌಕರರ ಸಂಘದ ಅಧ್ಯಕ್ಷರಾದ ಎಫ್ ಎಸ್ ತಳವಾರ,ಗೌರವಾಧ್ಯಕ್ಷರಾದ ಎಮ್ ಎಸ್ ಕೊಕ್ಕರಗುಂದಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಬಿ ಎಸ್ ಈಳಗೇರ, ಪದವೀಧರ ನೌಕರರ ಸಂಘದ ಅಧ್ಯಕ್ಷರಾದ ಎಮ್ ಡಿ ವಾರದ, ಕಾರ್ಯದರ್ಶಿ ಬಿ ಎಮ್ ಯರಗುಪ್ಪಿ, ರಾಜ್ಯ ಪರಿಷತ್ ಸದಸ್ಯರಾದ ಎಮ್ ಎಸ್ ಹಿರೇಮಠ, ಎಸ್ ಬಿ ಅಣ್ಣಿಗೇರಿ, ಎಮ್ ಎಸ್ ಚಾಕಲಬ್ಬಿ, ಈರಯ್ಯ ಹಿರೇಮಠ, ಎಮ್ ಎಸ್ ಹುಣಸೀಮರದ, ಎನ್ ಎಸ್ ಬಂಕಾಪುರ, ಎಮ್ ಎನ್ ಭರಮಗೌಡ್ರ, ವಿ ಎಸ್ ಓದುನವರ, ಎಫ್ ಪಿ ಡಂಬಳ ಹಾಗೂ ಇನ್ನಿತರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.