ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ.
ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
ಇನ್ನೂ ಇದೇ ವೇಳೇ ಬಜೆಟ್ನಲ್ಲಿ ಸುಧಾರಣಾ ಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡಲಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ರಚಿಸಲು ವಿವಿಧ ಕಾನೂನಿನಡಿಯಲ್ಲಿ 7,214 ಸಂಸ್ಥೆಗಳ ಶಾಸನಬದ್ಧ ಬ್ಯಾಂಕ್ ಡಿ ಲೆಕ್ಕಪರಿಶೋಧಕರಾಗಿರುತ್ತದೆ.
ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು. ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ.
ಈವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಒಟ್ಟಾರೆ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಅಂತ ತಿಳಿಸಿದ್ದಾರೆ