ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ.
ಅರಂತೋಡು:
ಗೂನಡ್ಕ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಅವರು ಮೂಲತಃ ಅರಂತೋಡು ಗ್ರಾಮದ ಕಿರ್ಲಾಯ ಪೂಜಾರಿ ಮನೆಯವರಾಗಿದ್ದಾರೆ.ಸುಳ್ಯದಲ್ಲಿ ಅವರು ಕುಟುಂಬ ಸಮೇತ ವಾಸವಾಗಿದ್ದರು.
ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದ್ದು, ಅವರು ಶಿಕ್ಷಕರಾಗಿದ್ದರು.
ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯ ಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.