ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ!!! ಮುಸುಕುಧಾರಿಯಿಂದ ಈ ಕೃತ್ಯ…
ಆತಂಕದ ವಾತಾವರಣ ಸೃಷ್ಟಿ…
ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ.
ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಅಲಿನ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ