(ಮಾ.6): 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ರುಪ್ಸಾ ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು.
ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.