ನಿನ್ನೆ ಸಾಕಷ್ಷು ವಿರೋಧಗಳ ಮದ್ಯೆಯೆ 5,8,9 ಮತ್ತು 11 ತರಗತಿಗಳಿಗೆ ಬೋರ್ಡ ಎಕ್ಸಾಂ ನಡೆಸದಂತೆ ಹೈಕೊರ್ಟ ಏಕಸದಸ್ಯ ಪೀಠ ಆದೇಶಿಸಿತ್ತು..
ಇಂದು ವಿಭಾಗಿಯ ಹೈಕೋರ್ಟ್ ನ್ಯಾಯಪೀಠವು ಈ ಆದೇಶಕ್ಕೆ ತಡೆಯಾಜ್ಞೆ ನೀಡಿ, ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.
ಈ ಅರ್ಜಿಯ ವಿಚಾರಣೆಯನ್ನು ನಿನ್ನೆ ನಡೆಸಿದ್ದಂತ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ರವಿ ಹೊಸಮನಜ ಅವರು 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದ್ದರು.
ಇಂದು ರಾಜ್ಯ ಸರ್ಕಾರದಿಂದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂತಹ ಮೇಲ್ಮನವಿಯನ್ನು ಆಲಿಸಿದಂತ ನ್ಯಾಯಪೀಠವು ಏಕ ಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಅಲ್ಲದೇ ಸೋಮವಾರದಿಂದ 5, 8, 9 ಮತ್ತು 11ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಅಂದಹಾಗೇ ಬಿಜೆಪಿ ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಎಕ್ಸಾಮ್ ನಡೆಸುವ ಚಿಂತನೆ ಮಾಡಲಾಗಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಮಾಡಲಾಗಿದೆ.