ರಾಜ್ಯ 7ನೇ ವೇತನ ಆಯೋಗದ ವರದಿಯನ್ನು (7th Pay Commission) ಸ್ವೀಕರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ವೇತನ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯದರ್ಶಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ವರದಿಯನ್ನು ಸಲ್ಲಿಸಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮತ್ತು ಪದಾಧಿಕಾರಿಗಳು ಭೇಟಿಯಾಗಿ ಸ್ಮರಣಿಕೆ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.
ನಂತರ ರಾಜ್ಯದ ಏಳನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
..
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ವರದಿಯನ್ನು ಸಲ್ಲಿಸಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮತ್ತು ಪದಾಧಿಕಾರಿಗಳು ಭೇಟಿಯಾಗಿ ಸ್ಮರಣಿಕೆ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.
ನಂತರ ರಾಜ್ಯದ ಏಳನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳ ಪರಿಷ್ಕರಣೆಗಾಗಿ ಸಲ್ಲಿಸಿದ್ದ ಮನವಿಯಲ್ಲಿ ಹಲವು ಅಂಶಗಳನ್ನು ಪರಿಗಣಿಸಿ ವೇತನ ಆಯೋಗ ಶಿಫಾರಸುಗಳನ್ನು ಮಾಡಿದೆ.
ವರದಿಯ ಪ್ರಮುಖ ಶಿಫಾರಸ್ಸುಗಳು
ದಿನಾಂಕ: 01-07-2022ಕ್ಕೆ ಇದ್ದಂತೆ ರಾಜ್ಯ ಸರ್ಕಾರಿ ನೌಕರರ ಮೂಲ ವೇತನಕ್ಕೆ ಶೇ. 27.50 ರಷ್ಟು ಫಿಟ್ ಮೆಂಟ್ ಹೆಚ್ಚಿಸಲು ಶಿಫಾರಸು
ದಿನಾಂಕ: 01-07-2022ಕ್ಕೆ ಇದ್ದಂತಹ ಶೇ. 31 ತುಟ್ಟಿಭತ್ಯೆ ವಿಲೀನ ಹಾಗೂ ಮೇಲಿನ ಶೇ.27.50 ರಷ್ಟು ಸೇರಿ ಒಟ್ಟು ಶೇ. 58.50ರಷ್ಟು ಮೂಲ ವೇತನದಲ್ಲಿ ಹೆಚ್ಚಳ.
ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ರೂ. 17,000ರಿಂದ 27,000ಕ್ಕೆ ಹಾಗೂ 1,04.600ರಿಂದ 2,41,200ಕ್ಕೆ ಹೆಚ್ಚಳ.
ಸರ್ಕಾರಿ ನೌಕರರಿಗೆ ಹೊಸ ವೇತನ ಶ್ರೇಣಿ ಹಾಗೂ ಫಿಟ್ ಮೆಂಟ್ ಸೌಲಭ್ಯವನ್ನು 2022ರ ಜು.01 ರಿಂದ ಕಾಲ್ಪನಿಕವಾಗಿ ಅನುಷ್ಠಾನಗೊಳಿಸಲು ಶಿಫಾರಸು.
ವಾರ್ಷಿಕ ವೇತನ ಬಡ್ತಿ ದರವನ್ನು ಕನಿಷ್ಠ ರೂ. 400ರಿಂದ ರೂ. 650ಕ್ಕೆ ಹಾಗೂ ಗರಿಷ್ಠ 3100ರಿಂದ 5,000 ಹೆಚ್ಚಳ
ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ದಿನಾಂಕ:2022ರ ಜುಲೈ 1ರಿಂದ ಭಾರತ ಸರ್ಕಾರವು ಮಂಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ ಶೇ. 0.722ರಷ್ಟು ನೀಡುವುದು.
ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದೆ ವೇತನ ಪರಿಷ್ಕರಿಸಿದಾಗ ಕೇಂದ್ರ ವೇತನ ರಚನೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಕೇಂದ್ರ ಮಾದರಿಯ ವೇತನ ನೀಡಲು ಶಿಫಾರಸು ಮಾಡಿದೆ.
ಗ್ರೂಪ್ ‘ಸಿ’ ಮತ್ತು ‘ಡಿ’ ವೃಂದದ ನೌಕರರಿಗೆ ಹಾಲಿ ಇರುವ ಜಿ.ಐ.ಎಸ್. ಮಾಸಿಕ ವಂತಿಗೆಯನ್ನು ಶೇ. 100% ಕ್ಕೆ ಹೆಚ್ಚಳ ಮತ್ತು ಗ್ರೂಪ್ ‘ಎ’ ಮತ್ತು ‘ಬಿ’ ವೃಂದಕ್ಕೆ ಶೇ. 50%ಕ್ಕೆ ಹೆಚ್ಚಿಸಲು ಶಿಫಾರಸು.
ಪರಿಷ್ಕರಣೆಯಿಂದ ಹೆಚ್ಚಳವಾಗುವ ಮೂಲ ವೇತನಕ್ಕೆ ಮನೆ ಬಾಡಿಗೆ ಭತ್ಯೆಗಳನ್ನು ಕ್ರಮವಾಗಿ ‘ಎ’ ವರ್ಗದ ನಗರಗಳಿಗೆ ಶೇ.20%, ‘ಬಿ’ ವರ್ಗದ ನಗರಗಳಿಗೆ ಶೇ.15%, ‘ಸಿ’ ವರ್ಗದ ಪ್ರದೇಶಗಳಿಗೆ ಶೇ.7.5% ಶಿಫಾರಸು.
ಪರಿಷ್ಕರಣೆಯಿಂದ ಹೆಚ್ಚಳವಾಗುವ ಮೂಲ ವೇತನಕ್ಕೆ ನಗರ ಪರಿಹಾರ ಭತ್ಯೆಗಳನ್ನು ಕ್ರಮವಾಗಿ ‘ಎ’ ಮತ್ತು ‘ಬಿ’ ವೃಂದದ ನೌಕರರಿಗೆ ರೂ. 600ರಿಂದ ರೂ. 900ಕ್ಕೆ ಮತ್ತು ‘ಸಿ ಮತ್ತು ‘ಡಿ’ ವೃಂದದ ನೌಕರರಿಗೆ ರೂ. 500ರಿಂದ ರೂ. 750 ಹೆಚ್ಚಳ,
ಸಮವಸ್ತ್ರ ಭತ್ಯೆ, ನಿಗದಿತ ಪ್ರಯಾಣ ಭತ್ಯೆ, ಸಾಗಣೆ ಭತ್ಯೆ, ದಿನಭತ್ಯೆ ಮತ್ತು ವರ್ಗಾವಣೆ ಅನುದಾನವನ್ನು ಹಾಲಿ ಇರುವ ದರಗಳಿಗೆ ಶೇ.25% ಹೆಚ್ಚಳ.
ವಿಕಲಚೇತನ ನೌಕರರಿಗೆ ಹಲವಾರು ಭತ್ಯೆಗಳು ಮತ್ತು ಸೌಲಭ್ಯಗಳನ್ನು ಹೆಚ್ಚಳಕ್ಕೆ ಶಿಫಾರಸು
ವಿಶೇಷಚೇತನ ಮಕ್ಕಳ ಶೈಕ್ಷಣಿಕ ಭತ್ಯೆಯನ್ನು ಪ್ರತಿ ತಿಂಗಳು 1000 ರೂ.ಗಳಿಂದ 2000 ರೂ. ಹೆಚ್ಚಳಕ್ಕೆ ಶಿಫಾರಸು.
ನಾಲ್ಕು ಚಕ್ರ ವಾಹನ ಖರೀದಿ ಮುಂಗಡವನ್ನು 3ಲಕ್ಷ ರೂ. ದಿಂದ 6ಲಕ್ಷ ರೂ.ಗೆ ಹಾಗೂ ದ್ವಿ-ಚಕ್ರ ವಾಹನಕ್ಕೆ 50,000 ರೂ.ಗಳಿಂದ 80,000 ರೂ. ಹೆಚ್ಚಳ.
ಗೃಹನಿರ್ಮಾಣ ಮುಂಗಡವನ್ನು ‘ಎ’ ವೃಂದಕ್ಕೆ 65 ಲಕ್ಷ ಮತ್ತು ಇತರೆ ವೃಂದದ ನೌಕರರಿಗೆ 40 ಲಕ್ಷಗಳಿಗೆ ಹೆಚ್ಚಳ.
ನೌಕರರ ಸೇವಾವಧಿಯಲ್ಲಿ ಮೂರು ಭಾರಿ ಎಲ್.ಟಿ.ಸಿ. ಸೌಲಭ್ಯಕ್ಕೆ ಅವಕಾಶ.
ಗ್ರೂಪ್ ‘ಡಿ’ ಮತ್ತು ‘ಸಿ’ ವೃಂದದ ನೌಕರರಿಗೆ ಹಾಲಿ ಇದ್ದಂತಹ ವೈದ್ಯಕೀಯ ಭತ್ಯೆ 200 ರಿಂದ 500ರೂ.ಗಳಿಗೆ ಹೆಚ್ಚಳ.
ಸರ್ಕಾರಿ ನೌಕರರ ಅವಲಂಬಿತ ಕುಟುಂಬ ಸದಸ್ಯರು ಅನಾರೋಗ್ಯದ ಸಂದರ್ಭದಲ್ಲಿ ಆರೈಕೆ ಮಾಡಲು ಶೇ. 50% ವೇತನದೊಂದಿಗೆ 180 ದಿನಗಳ ‘ಆರೈಕೆ ರಜೆ’ ಎಂಬ ಹೊಸ ಯೋಜನೆಗೆ ಶಿಫಾರಸು ಮಾಡಿದೆ.
ಸರ್ಕಾರಿ ಸೇವೆಗೆ ಸೇರುವ 2 ತಿಂಗಳ ಮೊದಲು ಮಗುವಿಗೆ ಜನ್ಮ ನೀಡಿದ ಮಹಿಳಾ ಸರ್ಕಾರಿ ನೌಕರರಿಗೆ ನವಜಾತ ಶಿಶುವಿನ ಹಾರೈಕೆಗಾಗಿ 18 ವಾರಗಳ ಹೆರಿಗೆ ರಜೆಗೆ ಶಿಫಾರಸು ಮಾಡಿದೆ.
ಕೆಲಸ-ವಿರಾಮ ಸಮತೋಲನವನ್ನು ಸುಧಾರಿಸಲು ಹಾಗೂ ಸರ್ಕಾರಿ ನೌಕರರ ಕೆಲಸದ ಗುಣಮಟ್ಟವನ್ನು ಹೆಚ್ಚಿಸಲು ವಾರದ ಐದು ದಿನಗಳ ಕೆಲಸದ ಅವಧಿಯನ್ನು ಪರಿಚಯಿಸಲು ಶಿಫಾರಸು ಮಾಡಿದೆ.
ರಾಜ್ಯ ಸರ್ಕಾರಿ ನೌಕರರ ಆಡಳಿತ ಇಲಾಖೆಯ ಹಾಗೂ ಕ್ಷೇತ್ರ ಇಲಾಖೆಗಳ ನೌಕರರಿಗೆ ಗುಣಮಟ್ಟದ ತರಬೇತಿಗಾಗಿ ಸಮಗ್ರ ತರಬೇತಿಗೆ ಶಿಫಾರಸು ಮಾಡಿದೆ.
ಈ ಮೇಲ್ಕಂಡ ಎಲ್ಲಾ ಸೌಲಭ್ಯಗಳು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ ರೀತಿಯಲ್ಲಿಯೇ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಅನ್ವಯಗೊಳಿಸಲು ಶಿಫಾರಸು ಮಾಡಿದೆ.
ಮಾಸಿಕ ಪಿಂಚಣಿಯ ಪ್ರಮಾಣವು ಅಂತಿಮ ಮೂಲ ವೇತನದ ಶೇ. 50% ರಷ್ಟು ಹಾಗೂ ಕುಟುಂಬ
ಪಿಂಚಣಿಯು ಶೇ. 30% ಮುಂದುವರೆದು, ಕನಿಷ್ಠ ಪಿಂಚಣಿ ರೂ. 13,500 ಹಾಗೂ ಗರಿಷ್ಠ
ಪಿಂಚಣಿ 1,20,600 ರೂ.ಗಳಿಗೆ ಪರಿಷ್ಕರಿಸಿದೆ.
70-80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿಯ ಹೆಚ್ಚುವರಿ ಶೇ. 10% ರಷ್ಟು ಶಿಫಾರಸ್ಸು ಮಾಡಿದೆ.
ಪಿಂಚಣಿದಾರರಿಗೆ ‘ಸಂಧ್ಯಾಕಿರಣ’ ಎಂಬ ಆರೋಗ್ಯ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಶಿಫಾರಸ್ಸು ಮಾಡಿದೆ. ಅಲ್ಲಿಯವರೆಗೆ ಮಾಸಿಕ ರೂ. 500-00ಗಳ ವೈದ್ಯಕೀಯ ಭತ್ಯೆ ನೀಡಲು ಶಿಫಾರಸು ಮಾಡುತ್ತದೆ.
ಪಿಂಚಣಿದಾರರು ಮರಣ ಹೊಂದಿದಲ್ಲಿ 10,000 ರೂ. ಶವಸಂಸ್ಕಾರ ಮೊತ್ತವನ್ನು ನೀಡಲು ಶಿಫಾರಸು
ವಿವಿಧ ವೃಂದಗಳ ವೇತನ ತಾರತಮ್ಯ ಹಾಗೂ ಇಲಾಖೆಗಳ ಬೇಡಿಕೆಗಳ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ನೀಡಿದ ಮನವಿಯನ್ನು ಪರಿಶೀಲಿಸಿ ಮತ್ತೊಂದು ಅಂತಿಮ ವರದಿಯನ್ನು ಆದಷ್ಟು ಶೀಘ್ರದಲ್ಲಿಯೇ ಆಯೋಗವು ಸರ್ಕಾರಕ್ಕೆ ಸಲ್ಲಿಸಲಿದೆ.