5,8, ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕಾದ ಶಿಕ್ಷಣ ಸಚಿವರು ಚುನಾವಣೆಯಲ್ಲಿ ಮಗ್ನರಾಗಿದ್ದಾರೆ…ಅಸಮರ್ಥರಾದ್ರಾ ಸಚಿವರು!!
ಯಾರು ಈ ಮಾತು ಹೇಳಿದ್ದಾರೆ? ಈ ವರದಿ ನೋಡಿ.
ಸರ್ಕಾರದ ನಿರ್ಧಾರದಿಂದ ಅಯೋಮಯವಾದ ಪೋಷಕರ ಹಾಗೂ ಶಿಕ್ಷಕರ ಸ್ಥಿತಿ!!
ಪರೀಕ್ಷೆ!!ಪರೀಕ್ಷೆ!! ಮಕ್ಕಳ ಮೇಲೆ ಮಾನಸಿಕತೆ ಬಗ್ಗೆ ಯೋಚನೆ ಮಾಡಿ…
ಬೆಂಗಳೂರು: 19: ಕರ್ನಾಟಕ ಸರ್ಕಾರವು ಯಾವುದೇ ಪೂರ್ವ ಸಿದ್ಧತೆ, ಮುಂದಾಲೋಚನೆ ಇಲ್ಲದೇ 5, 8, 9 ಮತ್ತು 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುತ್ತೇವೆ ಎಂದು ಧಿಡೀರ್ ಆದೇಶ ಹೊರಡಿಸಿದ್ದರಿಂದ ವಿದ್ಯಾರ್ಥಿಗಳ ಸ್ಥಿತಿ ಅಂತಂತ್ರವಾಗಿದೆ ಎಂದು ಬಿಜೆಪಿಯ ರಾಜ್ಯ ಕಾಂಗ್ರೆಸ್ ಆಡಳಿತವನ್ನು ಟೀಕಿಸಿದೆ.ಈ ಕುರಿತು ಮಂಗಳವಾರ ಬಿಜೆಪಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಎಡಬಿಡಂಗಿ ನಿರ್ಧಾರದಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಅತಂತ್ರವಾಗಿದೆ. ಪರೀಕ್ಷೆಗಳ ದಿನಾಂಕ ಪದೇ ಪದೇ ಬದಲಾಗುತ್ತಿರುವುದರಿಂದ ಪೋಷಕರು ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ ಎಂದು ಅವರು ವಿವರಿಸಿದರು. ಚುನಾವಣೆಯಲ್ಲಿ ಮಗ್ನರಾದ ಶಿಕ್ಷಣ ಸಚಿವಶಿಕ್ಷಣ ಇಲಾಖೆ ಇಷ್ಟೊಂದು ದೊಡ್ಡ ಗೊಂದಲದ ಗೂಡಾಗಿರುವ ಸಂದರ್ಭದಲ್ಲಿ ಸಮಸ್ಯೆಗೆ ಪರಿಷ್ಕಾರ ಹುಡುಕಿ ಪೋಷಕರಿಗೆ, ವಿಧ್ಯಾರ್ಥಿಗಳಿಗೆ ಧೈರ್ಯ ತುಂಬಬೇಕು.
ಅದನ್ನು ಬಿಟ್ಟು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಹೋದರಿಯ ಚುನಾವಣೆಯಲ್ಲಿ ಸಂಪೂರ್ಣ ಮಗ್ನರಾಗಿದ್ದಾರೆ.ರಾಜ್ಯ ಶಿಕ್ಷಣ ಸಚಿವರು ಇಂತಹ ವಿದ್ಯಾರ್ಥಿಗಳ ಪರ ಕಾಳಜಿ ವಹಿಸಬೇಕು. ಅದನ್ನು ಬಿಟ್ಟು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಮುಂದುವರೆಸಿದ್ದಾರೆ ಎಂದು ಅವರು ಆರೋಪಿಸಿದರು.