ವಿದ್ಯಾರ್ಥಿನಿಯರಿಂದಲೇ ಶಿಕ್ಷಕನ ವಿರುದ್ದ ಪೋಕ್ಸೊ ಪ್ರಕರಣ ದಾಖಲು..
ಇಂಥಹ ಶಿಕ್ಷಕರಿಗೆ ಏನು ಶಿಕ್ಷೆ?
ಮಂಗಳೂರು : ವಿದ್ಯಾರ್ಥಿನಿಯರಿಗೆ ಶಾಲೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು , ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿನಿಯರು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ದು , ವಿದ್ಯಾರ್ಥಿಗಳು ನೀಡಿದ ಮಾಹಿತಿ ಮೇರೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕ ರಕ್ಷಕ ಸಂಘದಿಂದ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..
ಶಾಲೆಗೆ ಚೈಲ್ಡ್ ರೈಟ್ಸ್ ಅಧಿಕಾರಿಗಳು, ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ ಶಿಕ್ಷಕನನ್ನ ಬಂಧಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ