ನಕಲಿ ಅಂಕಪಟ್ಟಿ ಹಾಗೂ ಪದವಿ ಪ್ರಮಾಣ ಪತ್ರ ಸಲ್ಲಿಸಿ ನೌಕರಿ ಗಿಟ್ಟಿಸೊಕೊಂಡ…ನೌಕರನ ವಿರುದ್ದ ಪೋಲಿಸ್ ಠಾಣೆಯಲ್ಲಿ ದೂರು ದಾಖಲು..
ಸರ್ಕಾರಿ ನೌಕರಿ ಪಡೆಯೋದು ಇಷ್ಟೊಂದು ಸರಳ!!!
ಹಾವೇರಿ: ನಕಲಿ ಅಂಕಪಟ್ಟಿ ಹಾಗೂ ಪದವಿ ಪ್ರಮಾಣ ಪತ್ರ ನೀಡಿ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆ ಗಿಟ್ಟಿಸಿಕೊಂಡ ನೌಕರ ಮೇಲೆ ಇಲ್ಲಿಯ ಶಹರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.
ರಾಣೆಬೆನ್ನೂರ ನಗರದ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಸಹಾಯಕ ನಿರ್ದೇಶಕರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಮಹೇಶ ಉಳುವಪ್ಪ ಸೋಮಣ್ಣನವರ (45) ಎಂಬುವರ ವಿರುದ್ಧ ದೂರು ದಾಖಲಾಗಿರುವುದು. ಈ ಕುರಿತು ಇಲಾಖೆಯ ಉಪ ನಿರ್ದೇಶಕಿ ವಿದ್ಯಾ ಹೊನಶೆಟ್ಟಿ ಪೊಲೀಸರು ದೂರು ನೀಡಿದ್ದಾರೆ.
ಆರೋಪಿಯು ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆ ಗಿಟ್ಟಿಸಿಕೊಳ್ಳಲು ಉತ್ತರ ಪ್ರದೇಶದ ಮೀರತ್ನ ಚೌಧರಿ ಚರಣಸಿಂಗ್ ವಿಶ್ವ ವಿದ್ಯಾಲಯದದಿಂದ ಬಿ.ಕಾಂ. ಪದವಿ ಪಡೆದಿರುವ ಕುರಿತು ನಕಲಿ ಅಂಕಪಟ್ಟಿ ಹಾಗೂ ಪದವಿ ಪ್ರಮಾಣ ಪತ್ರ ಸೃಷ್ಠಿಸಿಕೊಂಡು ಸರ್ಕಾರಕ್ಕೆ ನೀಡಿ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.