ಬೆಂಗಳೂರು: ಹೈಕೋರ್ಟ್ ಪೀಠವು 5.8.9 ನೇ ತರಗತಿ ವಿದ್ಯಾರ್ಥಿಗಳ ಬೊರ್ಡ ಪರೀಕ್ಷೆ ನಡೆಸುವಂತೆ ಆದೇಶ ನಿಡಿದೆ . ಶಿಕ್ಷಣ ಇಲಾಖೆ ಕೂಡ ಸಜ್ಜಾಗಿದೆ..
ಸೋಮವಾರದಿಂದ ಪರೀಕ್ಷೆ ಆರಂಭವಾಗಲಿವೆ.
ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5. 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ 2.2.4 : 6256/2024, 2.2.2 : 6257/2024 2 8 : 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿ, ಈ ಹಿಂದೆ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಮೌಲ್ಯಾಂಕನವನ್ನು ಮುಂದುವರೆಸುವಂತೆ ನೀಡಿದ್ದ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ರಾಜ್ಯ ಉಚ್ಚ ನ್ಯಾಯಾಲಯ ವಿಭಾಗೀಯ ಪೀಠಕ್ಕೆ ರವಾನಿಸಿತ್ತು. ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5. 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿತ್ತು.
ಮುಂದುವರೆದು, ರಾಜ್ಯ ಘನ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಸದರಿ ದಾವೆಯ ಪ್ರಕರಣವನ್ನು ವಿಚಾರಣೆ ನಡೆಸಿ ದಿನಾಂಕ: 22-3-2024ರಂದು ಅಂತಿಮ ತೀರ್ಪು ನೀಡಿದ್ದು, 5, 8 ಮತ್ತು 9ನೇ ತರಗತಿಗಳ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ಕಾರ್ಯವನ್ನು ಉಳಿದ ವಿಷಯಗಳಿಗೆ ಮುಂದುವರೆಸಲು ಸೂಚಿಸಿ ಆದೇಶಿಸಿರುತ್ತದೆ. ಅದರಂತೆ ಸದರಿ ಮೌಲ್ಯಾಂಕನ ಕಾರ್ಯವನ್ನು ವಿದ್ಯಾರ್ಥಿಗಳ ಅಭ್ಯಾಸದ ಹಿತದೃಷ್ಟಯಿಂದ ದಿನಾಂಕ: 25-3-2024ರಿಂದ ಪ್ರಾರಂಭಿಸಲು ಕ್ರಮವಹಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಗೆ ಕೋರಿದೆ.