SSLC ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿ ಸಾವು!!
ತುರುವೇಕೆರೆ(ತುಮಕೂರು): ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿಯೊಬ್ಬ ತೀವ್ರ ಅಸ್ವಸ್ಥಗೊಂಡು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿರುವ ಘಟನೆ ಪಟ್ಟಣದ ಶ್ರೀ ಸರಸ್ವತಿ ಬಾಲಕಿಯರ ಪ್ರೌಢಶಾಲಾ ಕೇಂದ್ರದಲ್ಲಿ ಸೋಮವಾರ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಚಿಕ್ಕರಾಂಪುರ ಗ್ರಾಮದ ಸಿ.ಎಸ್.ಮೋಹನ್ ಕುಮಾರ್(16) ಮೃತ ವಿದ್ಯಾರ್ಥಿ, ತಾಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿಯ ಕಂಚೀರಾಯ ಶ್ರೀನಿವಾಸ ಪ್ರೌಢಶಾಲೆ ವಿದ್ಯಾರ್ಥಿಯಾಗಿರುವ ಈತ, ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ