ವಿದ್ಯಾರ್ಥಿನಿ ಜೊತೆ ಶಿಕ್ಷಕಕನನ್ನು ಮನೆಗೆ ಕಳುಹಿಸಿದ ಶಿಕ್ಷಣ ಇಲಾಖೆ..
ಬಂಡೆ ಹೊಡೆದ ಉಪ ನಿರ್ದೇಶಕರು..
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಡಿಬಾರ್ ಮಾಡಿದ್ದು, ಶಿಕ್ಷಕನನ್ನು ಅಮಾನತು ಮಾಡಲಾಗಿದೆ..
ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಸಾಯಿ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಡಿಬಾರ್ ಮಾಡಲಾಗಿದೆ.
ಪರೀಕ್ಷಾ ಕೇಂದ್ರಕ್ಕೆ ಕಂದಾಯ ಉಪವಿಭಾಗಾಧಿಕಾರಿ, ಅಭೀದ್ ಗದ್ಯಾಳ ಅವರು ಭೇಟಿ ನೀಡಿ ಪರಿಶೀಲಿಸಿದಾಗ ವಿದ್ಯಾರ್ಥಿನಿ ನಕಲು ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಡಿಬಾರ್ ಮಾಡಲಾಗಿದೆ.
ಪರೀಕ್ಷೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಶಿಕ್ಷಕ ರಾಜಶೇಖರ ಬಂಡೆ ಅವರನ್ನು ಅಮಾನತು ಮಾಡಲಾಗಿದ್ದು, ಸೂಕ್ತ ಕ್ರಮಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ.