ಪರೀಕ್ಷಾ ಕೇಂದ್ರದಲ್ಲಿ ತುಟಿ ಬಿಚ್ಚಿದ ವಿದ್ಯಾರ್ಥಿಗಳು!! ಶಿಕ್ಷಕನನ್ನು ಮನೆಗೆ ಕಳುಹಿಸಿದ ಶಿಕ್ಷಣ ಇಲಾಖೆ..
ಇದೇಲ್ಲಾ ವೆಬ್ಕಾಸ್ಟೀಂಗ್ ಮಹಿಮೆ….
ದಾವಣಗೆರೆ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹರಿಹರ ತಾಲೂಕಿನ ಎಂಕೆಇಟಿಎಲ್ ಕೆ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಆದೇಶಿಸಿದ್ದಾರೆ.
ಬುಧವಾರ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿರುವ ಮಧ್ಯೆಯೇ ವಿದ್ಯಾರ್ಥಿಗಳು ಸಂಭಾಷಣೆಯಲ್ಲಿ ತೊಡಗಿದ್ದರೂ ಮೇಲ್ವಿಚಾರಕರಾಗಿ ಪರೀಕ್ಷಾ ಶಿಸ್ತು, ಗೌಪ್ಯತೆ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿರುವುದರಿಂದ ಅಮಾನತು ಮಾಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದ್ದು ನೇರ ದೃಶ್ಯಾವಳಿಗಳನ್ನು ಶಿಕ್ಷಣ ಇಲಾಖೆ ಆಯುಕ್ತರು ವೀಕ್ಷಣೆ ಮಾಡಿರುತ್ತಾರೆ.
ಆಯುಕ್ತರು ನೀಡಿದ ನಿರ್ದೇಶನದ ಮೇರೆಗೆ ಹರಿಹರ ತಾಲೂಕಿನ ಬನ್ನಿಕೋಡು ಕರ್ನಾಟಕ ಪಬ್ಲಿಕ್ ಸ್ಕೂಲ್ ಚಿತ್ರಕಲಾ ಶಿಕ್ಷಕ ರಿಯಾಜ್ ಅಹಮದ್ ಅವರನ್ನು ಅಮಾನತು ಮಾಡಲಾಗಿದೆ.