ಶಿಕ್ಷಕರೇ ನಕಲಿ ಅಬ್ಯರ್ಥಿಗಳನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ರು..ಕಣ್ಣಿಗೆ ಕಾಣುವ ಅಕ್ರಮವನ್ನು ನೊಡಿದ ತಕ್ಷಣ ಅಧಿಕಾರಿಗಳಿಗೆ ತಿಳಿಸಿ…
ಇದೊಂದು ಎಲ್ಲರಿಗೂ ಎಚ್ಚರಿಕೆ ಘಂಟೆ!!!
ಬಾಗಲಕೋಟೆ:
ತಾಲ್ಲೂಕಿನ ಬಾಗೇವಾಡಿ ಗ್ರಾಮದ ಶರಣಬಸವೇಶ್ವರ ಪ್ರೌಢ ಶಾಲೆಯಲ್ಲಿ ತೆರೆಯಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಬುಧವಾರ ಮೂವರು ಮೂಲ ಪರೀಕ್ಷಾ ಅಭ್ಯರ್ಥಿಗಳ ಬದಲಾಗಿ ಬೇರೆಯವರು ಅಕ್ರಮವಾಗಿ ಪರೀಕ್ಷೆ ಬರೆದಿದ್ದು, ಮುಖ್ಯ ಅಧೀಕ್ಷಕ ಹಾಗೂ ಕೊಠಡಿ ಮೇಲ್ವಿಚಾರಕರು ಅಕ್ರಮದಲ್ಲಿ ತೊಡಗಿದ್ದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಚಿಕ್ಕವಡ್ಡಟ್ಟಿ ಸರ್ಕಾರಿ ಪ್ರೌಢ ಶಾಲೆಯ ಮೂವರು ಖಾಸಗಿ ಅಭ್ಯರ್ಥಿಗಳು ನೇರವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಆದರೆ ಹೆಸರು ನೋಂದಾಯಿಸಿಕೊಂಡಿದ್ದರ ಬದಲಾಗಿ ಅದೇ ಗ್ರಾಮದ ಮೂವರು ಬೇರೆ ಯುವಕರು ಬಾಗೇವಾಡಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮಾ.25ರಂದು ಕನ್ನಡ ವಿಷಯ ಪರೀಕ್ಷೆ ಬರೆದಿದ್ದಾರೆ. ನಂತರ ಮಾ.27ರಂದು ಸಮಾಜ ವಿಜ್ಞಾನ ವಿಷಯ ಪರೀಕ್ಷೆ ಬರೆಯಲು ಕೇಂದ್ರಕ್ಕೆ ಆಗಮಿಸಿದ್ದರು.
ಪರೀಕ್ಷೆ ನಡೆಯುವಾಗ ಪರೀಕ್ಷಾ ಕೊಠಡಿ ಮೇಲ್ವಿಚಾರಕರಿಗೆ ಸಂಶಯ ಬಂದು ವಿಚಾರಿಸಿ ಪರಿಶೀಲನೆ ನಡೆಸಿದಾಗ ನಕಲಿ ವಿದ್ಯಾರ್ಥಿಗಳು ಸಿಕ್ಕು ಹಾಕಿಕೊಂಡಿದ್ದಾರೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಪರೀಕ್ಷೆ ಅಕ್ರಮವಾಗಿ ಬರೆಯುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ತನಿಕೆ ನಡೆಯುತ್ತಿದೆ ಎಂದು ಬಿಇಒ ಎಫ್.ಎಂ.ಫಡ್ನೇಶಿ ತಿಳಿಸಿದ್ದಾರೆ.