ದೇಶಾದ್ಯಂತ ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರನ್ನು ಸ್ಮರಿಸುತ್ತಿದ್ದಾರೆ!!ಇಂತಹ ಮಹಾನ್ ವ್ಯಕ್ತಿಗೆ ಅವಮಾನ ಮಾಡಿದ ನಗರಸಭೆ ಪೌರಾಯುಕ್ತರನ್ನು ಅಮಾನತ್ ಮಾಡಿ ಆದೇಶ ಮಾಡಿದ್ರು ಜಿಲ್ಲಾಧಿಕಾರಿ..
ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ಕೊಡದ ಅಧಿಕಾರಿ!!!
ಹಾವೇರಿ: ಅಂಬೇಡ್ಕರ್ ಜಯಂತಿ ಆಚರಣೆಯ ಸಿದ್ಧತೆ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಹಾವೇರಿ ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ ಅವರನ್ನು ಅಮಾನತುಗೊಳಿಸಿ ಆದೇಶಿಸಿರುವ ಜಿಲ್ಲಾಧಿಕಾರಿ, ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಿದ್ದಾರೆ.
ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಅವರ ಪುತ್ಥಳಿ, ಸರ್ಕಲ್ನಲ್ಲಿ ಸುಣ್ಣಬಣ್ಣ ಮಾಡದೇ ಪೌರಾಯುಕ್ತರು ನಿರ್ಲಕ್ಷ್ಯ ತೋರಿರುವ ಬಗ್ಗೆ ಸಾರ್ವಜನಿಕರು ದೂರಿದ್ದರು.
ಸ್ಥಳಕ್ಕೆ ಅಧಿಕಾರಿಗಳ ತಂಡ ಆಗಮಿಸಿದ್ದರೂ ಅಲ್ಲಿಗೆ ಪೌರಾಯುಕ್ತ ಪರಶುರಾಮ ಚಲುವಾದಿ ಬಂದಿರಲಿಲ್ಲ. ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ತಮ್ಮ ಹಂತದಲ್ಲಿ ಪೌರಾಯುಕ್ತರನ್ನು ಅಮಾನತುಗೊಳಿಸಿ, ಅನುಮೋದನೆಗಾಗಿ ಸರ್ಕಾರಕ್ಕೆ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.