ವರ್ಗಾವಣೆ ನೀರಿಕ್ಷೇಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್!!
ಶಿಕ್ಷಕರ ವರ್ಗಾವಣೆಗೆ ಮತ್ತೆ ಗ್ರಹಣ…!!
ಬೆಂಗಳೂರು:
ಶಿಕ್ಷಕರ ವರ್ಗಾವಣೆಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆಎಟಿ) ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬ್ರೇಕ್ ಬಿದ್ದಿದೆ.
ಪ್ರಸ್ತುತ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜಾರಿಯಲ್ಲಿದೆ.
ಮೇ 15ರವರೆಗೆ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೀತಿ ಸಂಹಿತೆ ಮುಗಿದ ನಂತರ ಶಿಕ್ಷಣ ಇಲಾಖೆ ವರ್ಗಾವಣೆ ಕೌನ್ಸೆಲಿಂಗ್ ನಡೆಸಲು ತೀರ್ಮಾನಿಸಿತ್ತು. ಕಲಬುರ್ಗಿಯ ಕೆಎಟಿ ವರ್ಗಾವಣೆಗೆ ತಡೆಯಾಜ್ಞೆ ನೀಡಿದೆ.
ವೇಯಿಟೇಜ್ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಕೆಲವು ಶಿಕ್ಷಕರು ಕೆಎಟಿಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಮಂಡಳಿ ಅರ್ಜಿ ಇತ್ಯರ್ಥವಾಗುವವರೆಗೆ ಶಿಕ್ಷಕರ ವರ್ಗಾವಣೆಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ..