ಬೆಂಗಳೂರು : ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ.ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ಇಬ್ಬರು ಮಕ್ಕಳು ಇದ್ದಾರೆ. ಕನ್ನಡದ ರೋಬೋ ಫ್ಯಾಮಿಲಿ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ನಟಿ ಪವಿತ್ರಾ ಅವರು ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು.