ಶಾಲೆ ಆರಂಭಕ್ಕೂ ಮೋದಲೆ ಶಿಕ್ಷಕರ ಈ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ..
ಗುಣ ಮಟ್ಟದ ಶಿಕ್ಷಣ ನೀಡಲು ಶಿಕ್ಷಕರ ಸಂಘದ ಮನವಿಗೆ ಸರ್ಕಾರ, ಶಿಕ್ಷಣ ಇಲಾಖೆ ಸ್ಪಂದಿಸಲಿ…
ಏನಿದು ಮನವಿ ನೀವೆ ನೋಡಿ..
ಬೆಂಗಳೂರು:
ಪ್ರಸಕ್ತ ಶೈಕ್ಷಣಿಕ ಸಾಲಿನ ತರಗತಿಗಳು ಮೇ 29 ರಿಂದ ಆರಂಭವಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಹಾಗೂ ರಾಜ್ಯಾದ್ಯಕ್ಷರಾದ ಕೆ ನಾಗೇಶ ಅವರು ಸಂಘದ ವತಿಯಿಂದ ಸಿಎಂಗೆ ಮನವಿ ಸಲ್ಲಿಸಿದ್ದು, ಪ್ರಸಕ್ತ ಸಾಲಿನ ತರಗತಿಗಳು ಮೇ 29 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 50,000ಕ್ಕೂ ಹೆಚ್ಚು ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು ಎಂದು ಕೋರಲಾಗಿದೆ.
ಪ್ರಾಥಮಿಕ ಶಾಲೆಗಳಲ್ಲಿ 50,000, ಪ್ರೌಢಶಾಲೆಗಳಲ್ಲಿ 10,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕಳೆದ ವರ್ಷದಂತೆ ಈ ವರ್ಷವೂ ತರಗತಿಗಳು ಆರಂಭವಾಗುವ ಮೊದಲೇ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೈಕ್ಷಣಿಕ ಚಟುವಟಿಕೆಗಳು ಸುಗಮವಾಗಿ ನಡೆಯಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.