ಶಿಕ್ಷಕ ಹುದ್ದೆಯಲ್ಲಿರುವರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ..
700 ಹುದ್ದೆಗಳ ಮಾಹಿತಿ ಇಲ್ಲಿದೆ ನೋಡಿ..
ಬೆಂಗಳೂರು: ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ ಹುದ್ದೆಗಳು ಸೇರಿದಂತೆ 700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀ
ರಾಜ್ಯದಲ್ಲಿ 2018-19 ನೇ ಸಾಲಿನಲ್ಲಿ ಆರಂಭಿಸಲಾದ 100 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರತಿ ಶಾಲೆಗೆ 7 ಹುದ್ದೆಗಳಂತೆ ಒಟ್ಟು 700 ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.
ಹುದ್ದೆಗಳ ವಿವರ
ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ 100 ಹುದ್ದೆಗಳು
ಕನ್ನಡ-100
ಇಂಗ್ಲಿಷ್-100
ಉರ್ದು ಭಾಷೆ-100
ಗಣಿತ-100
ವಿಜ್ಞಾನ-100
ಸಮಾಜ ವಿಜ್ಞಾನ -100 ಹುದ್ದೆಗಳು ಸೇರಿದಂತೆ ಒಟ್ಟು 700 ಹುದ್ದೆಗಳಿಗೆ ವೃಂದ ಹಾಗೂ ನೇಮಕಾತಿ ನಿಯಮಗಳ ಅನ್ವಯ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.