ಶಾಲೆ ಆರಂಭದ ಮೊದಲ ದಿನವೇ ಮಕ್ಕಳಿಗೆ ಸಿಗಲಿವೆ ಪಠ್ಯ ಪುಸ್ತಕ ಹಾಗೂ ಸಮಸವಸ್ತ್ರ..
ಶಾಲಾ ಪ್ರಾರಂಭೊತ್ಸವಕ್ಕೆ ಸಕಲ ಸಿದ್ದತೆ ಮಾಡೊಕೊಳ್ಳಲಾಗಿದೆ.
ಈ ಕುರಿತು ಒಂದು ವರದಿ..
ಬೆಂಗಳೂರು: 2024 -25 ನೇ ಸಾಲಿನ ಶೈಕ್ಷಣಿಕ ಅವಧಿ ನಾಳೆಯಿಂದ ಆರಂಭವಾಗಲಿದೆ. ಮೇ 29ರ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿದ್ದು, ಮಕ್ಕಳ ಸ್ವಾಗತಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ.
ಈಗಾಗಲೇ ಸಮವಸ್ತ್ರ ಪೂರ್ಣ ಪ್ರಮಾಣದಲ್ಲಿ ತಾಲೂಕು ಮಟ್ಟಕ್ಕೆ ರವಾನೆಯಾಗಿದ್ದು, ಶೇ. 75 ರಿಂದ 80ರಷ್ಟು ಪಠ್ಯಪುಸ್ತಕಗಳನ್ನು ಕೂಡ ಸರಬರಾಜು ಮಾಡಲಾಗಿದೆ.
ಇನ್ನೆರಡು ದಿನಗಳಲ್ಲಿ ಉಳಿದ ಪಠ್ಯಪುಸ್ತಕಗಳ ಪೂರೈಕೆಯಾಗಲಿದ್ದು, ಬಿಇಓ, ಡಿಡಿಪಿಐಗಳು ಶಾಲೆಗಳಿಗೆ ಅವುಗಳನ್ನು ತಲುಪಿಸಿ ಶಾಲೆ ಪ್ರಾರಂಭದ ದಿನವೇ ವಿತರಣೆಗೆ ಕ್ರಮ ವಹಿಸಬೇಕು. ಶಾಲೆಯನ್ನು ಸ್ವಚ್ಛಗೊಳಿಸಿ ತಳಿರು ತೋರಣ, ರಂಗೋಲಿ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ ಮುಖ್ಯ ಶಿಕ್ಷಕರು, ಕೆಲ ಸಹ ಶಿಕ್ಷಕರು ಶಾಲೆ ಆರಂಭಕ್ಕೂ ಎರಡು ದಿನಗಳ ಮೊದಲೇ ಕೆಲಸಕ್ಕೆ ಹಾಜರಾಗಿದ್ದು ಸಿದ್ಧತೆಗಳನ್ನು ಮಾಡಿ ಕೊಂಡಿದ್ದಾರೆ.
ಶಾಲೆಯ ಅಂಗಳ ಹಾಗೂ ಶಾಲಾ ಕೊಠಡಿ, ಶೌಚಾಲಯಗಳನ್ನು ಈಗಾಗಲೇ ಸ್ವಚ್ಛಗೊಳಿಸ ಲಾಗಿದೆ. ಬಹುತೇಕ ಕಡೆ ಸಣ್ಣಪುಟ್ಟ ದುರಸ್ತಿ ಕಾರ್ಯ ಪೂರ್ಣಗೊಳಿಸಲಾಗಿದೆ. ಮಾವಿನ ತೋರಣ, ಬಾಳೆಕಂದು ಕಟ್ಟಿ, ರಂಗೋಲಿ ಬಿಡಿಸಿ ಶಾಲೆಗಳನ್ನು ಸಿಂಗಾರಗೊಳಿಸುವ ಕೆಲಸ ಸಾಗಿದೆ. ಶಾಲಾ ಆರಂಭದ ದಿನ ಒಂದು ರೀತಿ ಹಬ್ಬದ ಸಂಭ್ರಮವಿರಲಿದೆ.
ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ ಮುಖ್ಯ ಶಿಕ್ಷಕರು, ಕೆಲ ಸಹ ಶಿಕ್ಷಕರು ಶಾಲೆ ಆರಂಭಕ್ಕೂ ಎರಡು ದಿನಗಳ ಮೊದಲೇ ಕೆಲಸಕ್ಕೆ ಹಾಜರಾಗಿದ್ದು ಸಿದ್ಧತೆಗಳನ್ನು ಮಾಡಿ ಕೊಂಡಿದ್ದಾರೆ.
ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ ಮುಖ್ಯ ಶಿಕ್ಷಕರು, ಕೆಲ ಸಹ ಶಿಕ್ಷಕರು ಶಾಲೆ ಆರಂಭಕ್ಕೂ ಎರಡು ದಿನಗಳ ಮೊದಲೇ ಕೆಲಸಕ್ಕೆ ಹಾಜರಾಗಿದ್ದು ಸಿದ್ಧತೆಗಳನ್ನು ಮಾಡಿ ಕೊಂಡಿದ್ದಾರೆ