ಚುನಾವಣೆ ಸಂದರ್ಭದಲ್ಲಿ ಚರ್ಚೆಗೆ ಬಂದ ಏಳನೇ ವೇತನ ಆಯೋಗ ಹಾಗೂ ಓಪಿಎಸ್…..
ನಮ್ಮ ರಾಜ್ಯದ ನೌಕರರಿಗೂ ಜಾರಿ ಆಗುತ್ತಾ ಓಪಿಎಸ್ ಹಾಗೂ ೭ ನೇ ವೇತನ ಆಯೋಗ!!
ಯಾರು? ಏನು? ಹೇಳಿದ್ದಾರೆ ನೋಡಿ..
ಬೆಂಗಳೂರು, ಮೇ 30: ನಮ್ಮ ಪಕ್ಷ ಒಪಿಎಸ್, 7ನೇ ವೇತನ ಆಯೋಗದ ವಿಚಾರದಲ್ಲಿ ಸ್ಪಷ್ಟತೆ ಹೊಂದಿದೆ. ಹೀಗಾಗಿ ಪದವೀಧರರು ಹಾಗೂ ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿಗಳಾದ ರಾಮೋಜಿಗೌಡರು, ಮರಿತಿಬ್ಬೇಗೌಡರು, ಶ್ರೀನಿವಾಸ್, ಆಯನೂರು ಮಂಜುನಾಥ್, ಚಂದ್ರಶೇಖರ್ ಪಾಟೀಲ್ ಅವರಿಗೆ ಮತ ಹಾಕಬೇಕು ಎಂದು ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಮನವಿ ಮಾಡಿದರು.
ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಮೋಜಿ ಗೌಡ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಜೂನ್ 3ರಂದು ನಡೆಯಲಿರುವ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿ ರಾಮೋಜಿ ಗೌಡರು ಸ್ಪರ್ಧಿಸಿದ್ದಾರೆ. ಈ ಬಾರಿ ಅವರು ಮೊದಲ ಸ್ಥಾನ ಪಡೆಯುವ ವಿಶ್ವಾಸವಿದೆ. ವಿರೋಧ ಪಕ್ಷದವರಿಗೆ ಇದನ್ನು ಅರಗಿಸಿಕೊಳ್ಳಲಾಗದೇ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು..
ಬೆಂಗಳೂರು, ಮೇ 29: 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡದ ಈ ಕಾಂಗ್ರೆಸ್ ಸರಕಾರವು ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ. ಒಪಿಎಸ್ ಕುರಿತು ಸುಳ್ಳು ಭರವಸೆ ಕೊಟ್ಟಿದ್ದಾರೆ. ಇದೇ ಯುಪಿಎ ಸರಕಾರ ಎನ್ಪಿಎಸ್ ಜಾರಿಗೊಳಿಸಿತ್ತು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು.
ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರವನ್ನು ಸದಾ ಹಾಳು ಮಾಡುವ ಕೆಲಸದಲ್ಲಿ ಕಾಂಗ್ರೆಸ್ಸಿನವರು ತೊಡಗಿದ್ದಾರೆ. ಸಿಇಟಿ ಪರೀಕ್ಷೆ ವಿಚಾರ, ಹೊಸದಾಗಿ ಜಾರಿ ಮಾಡಿದ ಪಬ್ಲಿಕ್ ಎಕ್ಸಾಮ್ ವಿಚಾರದಲ್ಲಿ ಗೊಂದಲ, ಸಮಸ್ಯೆಗಳು ಕಾಡುವಂತಾಗಿದೆ. ಶಿಕ್ಷಣ ವಾತಾವರಣವನ್ನು ಹದಗೆಡಿಸಿದ್ದಾರೆ. ಯುವ ನೀತಿಯಲ್ಲೂ ಡೋಂಗಿ ನೀತಿ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.