65 ವಿದ್ಯಾರ್ಥಿಗಳನ್ನು ಶಾಲೆಗೆ ಕರೆದಕೊಂಡು ಹೋಗುವ ವೇಳೆ ಬಸ್ ಚಾಲಕನಿಗೆ ಹೃದಯಾಘಾತ….
ಬಸ್ ಚಾಲಕ ಸಾವು!! 65 ವಿದ್ಯಾರ್ಥಿಗಳ ಜೀವ ಉಳಿಸಿದ ಚಾಲಕ..
ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಮೃತಪಟ್ಟವರು.
ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದುರಾದೃಷ್ಟವಶಾತ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಸುಮಾರು 65 ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ದಾರಿ ಮಧ್ಯೆ ಐವರು ಮಕ್ಕಳ ಇಳಿಸಿದ ಬಸ್, ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಆಲ್ವಿನ್ ಡಿಸೋಜ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತೆನ್ನಲಾಗಿದೆ.
ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ ಚರಂಡಿಗೆ ಸರಿಸಿ ನಿಲ್ಲಿಸಿದರು. ಇದರಿಂದ ಕೆಲವು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ತೀವ್ರವಾಗಿ ಅಸ್ವಸ್ಥರಾಗಿರುವ ಚಾಲಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.