ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಎನ್ಡಿಎ ಸರ್ಕಾರ…
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಸಿಹಿ ಸುದ್ದಿಯನ್ನು ನೀಡಲು ಮುಂದಾಗಿದೆ. ಸರ್ಕಾರ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಪಿಂಚಣಿ ಯೋಜನೆಯಡಿ ಭಾರೀ ಬದಲಾವಣೆ ತರುವ ನಿರೀಕ್ಷೆ ಇದ್ದು ಇದರಿಂದ ನಿವೃತ್ತ ನೌಕಕರಿಗೆ ಉಪಯೋಗವಾಗಲಿದೆ.
ಸರ್ಕಾರದ ಮುಂದಿರುವ ಪ್ರಸ್ತಾವನೆಯ ಪ್ರಕಾರ ಓರ್ವ ನೌಕರ ಪಡೆದ ಕೊನೆಯ ಮೂಲ ವೇತನದ 50% ವರೆಗಿನ ಪಿಂಚಣಿಯನ್ನು ನೀಡುವ ಬಗ್ಗೆ ಸರ್ಕಾರ ಚಿಂತಿಸುತ್ತಿದ್ದು , ಈ ಯೋಜನೆ ಜಾರಿಗೊಳಿಸಿದರೆ 2004 ರಿಂದ ಎನ್ಪಿಎಸ್ ಅಡಿಯಲ್ಲಿ ದಾಖಲಾಗಿರುವ ಸರಿಸುಮಾರು 8.7 ಮಿಲಿಯನ್ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಇದರ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ.
ಮೋದಿ ನೇತೃತ್ವದ ಸರ್ಕಾರ ಮಂಡಿಸಲಿರುವ ಬಜೆಟ್ನಲ್ಲಿ ಈ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ನಿವೃತ್ತ ನೌಕರರು ಇದರ ಲಾಭ ಪಡೆಯುವ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ.