ಸರ್ಕಾರಿ ನೌಕರರಿಗೆ ಭಾರಿ ನಿರಾಸೆ ಮೂಡಿಸಿದ ಸರ್ಕಾರದ ನಡೆ…
ನಮ್ಮ ನೌಕರರು ಕೂಡ ಮನುಷ್ಯರೇ ಅಲ್ಲವೇ??
ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡುವಲ್ಲಿ ವಿಫಲವಾದ ಸಂಘಟನೆ!!
ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮ್..
ಬಹಿರಂಗವಾಗಿ ಸರ್ಕಾರದ ವಿರುದ್ದ ಗುಡುಗಿದ ನೌಕರರು..
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಗುರುವಾರ (ಜೂನ್ 13) ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ. ರಾಜ್ಯದಲ್ಲಿ ಏಳನೇ ವೇತನ ಆಯೋಗದ (7th Pay Commission) ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ.
ಇದರಿಂದಾಗಿ, ಏಳನೇ ವೇತನ ಆಯೋಗದ ಜಾರಿ ಕುರಿತು ಭಾರಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇದರಿಂದ ನಿರಾಸೆಯಾದಂತಾಗಿದೆ.
ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳ ಕುರಿತು ಮಾಹಿತಿ ನೀಡಿದ್ರು..
ಲೋಕಸಭೆ ಚುನಾವಣೆ ಬಳಿಕ ವೇತನ ಆಯೋಗ ಜಾರಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿತ್ರು, ಆದ್ರೆ ರಾಜ್ಯ ಸರ್ಕಾರ ಅಧಿಕೃತ ಮಾಹಿತಿ ಬಂದಿದೆ ಎಂದು ಹೇಳಿ ಕೈ ತೊಳೆದುಕೊಂಡಿದೆ….
ಮುಂದೆ ಜಿಲ್ಲಾ ಪಂಚಾಯತಿ ಚುನಾವಣೆ ಬರುತ್ತದೆ, ಆವಾಗ ಮತ್ತೆ ವೇತನ ಆಯೋಗ ವರದಿ ಜಾರಿ ಪ್ರಸ್ತಾಪ ವಾಗುತ್ತದೆ…
ಇವತ್ತು ಜಾರಿ ಆಗುತ್ತದೇಯೋ ಅಥವಾ ನಾಳೆ ಜಾರಿ ಆಗುತ್ತದೆ ಎಂಬ ಆಶಾ ಭಾವನೆಯಲ್ಲಿದ್ದರು..
ಮಾನ್ಯ ಮುಖ್ಯ ಮಂತ್ರಿಗಳಿಗೆ ರಾಜ್ಯ ಸರ್ಕಾರಿ ನೌಕರರ ಕಷ್ಟ ಕಾಣುತ್ತಿಲ್ಲ, ಇವರು ಕೂಡ ಮನುಷ್ಯರೇ ಅಲ್ಲವೇ?