ಸರ್ಕಾರದ ವಿರುದ್ದ ಸಿಡಿದೆದ್ದ ನೌಕರರ ಸಂಘ..
ಶೇ.30 ವೇತನ ಹೆಚ್ಚಳಕ್ಕೆ ನೌಕರರ 2 ವಾರದ ಗಡುವು.
ಸರ್ಕಾರದ ವಿರುದ್ದ ಪ್ರತಿಭಟನೆಗೆ ನಿರ್ಧಾರ!!!
ಎಳಿ ಎದ್ದೇಳಿ!!ಗುರಿ ಮುಟ್ಟುವವರೆಗೆ ನಿಲ್ಲದಿರಿ!!!
ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಹೆಚ್ಚಳ ಮಾಡುವ ಕುರಿತು ಮುಂದಿನ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಸಚಿವಾಲಯ ನೌಕರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಕೂಡಲೇ ಶೇ.30 ರಷ್ಟು ವೇತನ ಹೆಚ್ಚಳ ಮಾಡಬೇಕು. ಉದಾಸೀನ ಧೋರಣೆ ತಾಳಿದರೆ ರಾಜ್ಯಮಟ್ಟದ ಸಂಘಟನೆ ಜೊತೆ ಸೇರಿ ಚರ್ಚಿಸಿ ಪ್ರತಿಭಟನೆಯ ರೂಪುರೇಷೆ ಸಿದ್ದಪಡಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ರಮೇಶ್ ಸಂಗಾ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ನೀತಿಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗದ ವರದಿ ಮುಖ್ಯಮಂತ್ರಿಯವರಿಗೆ ಸಲ್ಲಿಕೆಯಾಗಿದೆ. ಚುನಾವಣೆ ಬಳಿಕ ವರದಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿಯವರು ಆಶ್ವಾಸನೆ ನೀಡಿದ್ದರು. ಆದರೆ, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳದೇ ಇರುವುದು ನೌಕರರಿಗೆ ತೀವ್ರ ನಿರಾಸೆಯಾಗಿದೆ ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.