7ನೇ ವೇತನ ಆಯೋಗದ ಅನುಷ್ಠಾನದ ಕುರಿತು ಮಾಹಿತಿ
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಕ್ಷರಿ ರವರ ನೇತೃತ್ವದಲ್ಲಿ ಸಂಘದ ನಿಯೋಗವು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಪಿ.ಸಿ. ಜಾಫರ್ ರವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ 7ನೇ ವೇತನ ಆಯೋಗದ ವರದಿ ಬಗ್ಗೆ ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚಿಸಿದ್ದು, ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ ಅಂತಿಮ ತೀರ್ಮಾನವನ್ನು ಶೀಘ್ರದಲ್ಲೇ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಾದ ರಮೇಶ್ ರವರು, ಕೇಂದ್ರ ಸಂಘದ ಪದಾಧಿಕಾರಿಗಳಾದ ವೆಂಕಟೇಶಯ್ಯನವರು, ಶ್ರೀನಿವಾಸ್ ತಿಮ್ಮೇಗೌಡರವರು, ಎಂ.ಬಿ ಬಳ್ಳಾರಿರವರು, ಎಂ.ವಿ.ರುದ್ರಪ್ಪರವರು, ಸದಾನಂದ್ ರವರು, ಮೋಹನ್ ಕುಮಾರ ರವರು, ಹರ್ಷರವರು, ದಿನೇಶ್ ರವರು, ಸಿದ್ದೇಶ್ ರವರು, ಗಿರಿಗೌಡರವರು ಹಾಗೂ ರಾಮನಗರ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.