ಏಳನೇ ವೇತನ ಆಯೋಗ ವರದಿ ಜಾರಿಗೆ ಸರ್ಕಾರಕ್ಕೆ ಡೆಡ್ಲೈನ್ ನೀಡಿದ ಸಿ.ಎಸ್.ಷಡಕ್ಷರಿ!!!
ಓಪಿಎಸ್ ಮರು ಜಾರಿ ಹಾಗೂ ವೇತನ ಪರಿಕ್ಷಕರಣೆಗೆ ನೌಕರರ ಸಂಘದಿಂದ ಸರ್ಕಾರಕ್ಕೆ ಡೆಡಲೈನ್…
ಸಚಿವ ಸಂಪುಟದಲ್ಲಿ ಅನುಮೋದನೆಯಾಗದ ವೇತನ ಆಯೋಗ ವರದಿ ಜಾರಿ..
ಇದೇ ಮೋಲದ ಬಾರಿಗೆ ಸಿ.ಎಸ್.ಷಡಕ್ಷರಿಯವರಿಂದ ಸರ್ಕಾರ ಕ್ಕೆ ಇದು ಕೊನೆಯ ಡೆಡ್ಲೈನ್!!!
ಲಿಂಗಸುಗೂರು: ಏಳನೇ ವೇತನ ಆಯೋಗ ವರದಿಯನ್ನು ಯಥಾವತ್ತಾಗಿ ಈ ತಿಂಗಳು ಅಂತ್ಯದೊಳಗೆ ಸರಕಾರ ಜಾರಿ ಮಾಡದಿದ್ದರೆ ಮುಂದಿನ ಹೋರಾಟಕ್ಕೆ ರೂಪರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.
ರವಿವಾರ ಸರಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲೂಕು ಶಾಖೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಸರಕಾರದ ಅವಧಿಯಲ್ಲಿ 2022ರ ಜುಲೈನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿ ಆಗಬೇಕಿತ್ತು. ಶೇ.40 ಮೂಲ ವೇತನ ಹೆಚ್ಚಿಸಬೇಕೆಂಬ ಬೇಡಿಕೆಗೆ ಸರ್ಕಾರ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ಮಾತ್ರ ಹೆಚ್ಚಿಸಿತ್ತು. ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ 7ನೇ ವೇತನ ಆಯೋಗ ಮತ್ತೆ ಸಾಧಕ ಬಾಧಕ ಅಧ್ಯಯನ ನಡೆಸಿ ಕಳೆದ ಮಾರ್ಚ್ನಲ್ಲೇ ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಿ ನೀಡಿದೆ ಎಂದರು.
ಆದರೆ, ಅಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ವರದಿ ಬಗ್ಗೆ ಯಾವುದೇ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಆಯೋಗವು ಮೂಲ ವೇತನದ ಶೇಕಡಾ 27.5ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ಅದನ್ನು ಯಥಾವತ್ತಾಗಿ ಮಾಸಾಂತ್ಯದೊಳಗೆ ಜಾರಿಗೊಳಿಸಬೇಕು.
ಸರಕಾರ ಉದಾಸೀನ ಮಾಡಿದರೆ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಂದಿನ ಹೋರಾಟದ ರೂಪರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದರು.
ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲೇ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಬಗ್ಗೆ ಭರವಸೆ ನೀಡಿತ್ತು.ಸರ್ಕಾರ ಎಲ್ಲಾ ಭಾಗ್ಯಗಳ ನೀಡಿದಂತೆ ಸರ್ಕಾರಿ ನೌಕರರಿಗೂ 7ನೇ ವೇತನ ಹಾಗೂ ಹಳೆ ಪಿಂಚಣಿ ವ್ಯವಸ್ಥೆಭಾಗ್ಯ ನೀಡಬೇಕು. ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರಬೇಕೆಂದರು.
ಸಂಘ ಒಗ್ಗಟ್ಟಿನ ಶಕ್ತಿಯಿಂದಲೇ ಕಳೆದ ಸರಕಾರದ ಅವಧಿಯಲ್ಲಿ ನೌಕರರ ಹಿತದೃಷ್ಟಿಯಿಂದ 25 ಸರಕಾರಿ ಆದೇಶಗಳು ಜಾರಿಯಾಗಿವೆ 2006 ಏ.1ರನಂತರ ಸರ್ಕಾರಿ ಸೇವೆಗೆ ಸೇರ್ಪಡೆಯಾದವರ ಹಳೆ ಪಿಂಚಣಿ ವ್ಯವಸ್ಥೆಗೆ ಒಳಪಡಿಸಬೇಕೆಂಬುದು ನಮ್ಮ ಬೇಡಿಕೆ.ಈ ಬಗ್ಗೆ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, 11,366 ನೌಕರರ ಹಳೆ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಕೆಲಸವಾಗಿದೆ ಎಂದರು.