ಡಿಸಿ ಹಾಗೂ ಸಿಇಓ ಅವರನ್ನು ತರಾಟೆಗೆ ತೆಗೆದುಕೊಂಡ ಸಿಎಮ್ ಸಿದ್ದರಾಮಯ್ಯ….
ಶಿಕ್ಷಣ ವ್ಯವಸ್ಥೆ ಹಾಳು ಆಗೋದಕ್ಕೆ ಕಾರಣ ಏನು ಅಂತ ಸ್ವತಃ ಸಿಎಮ್ ಅವರೆವಹೇಳಿದ್ದಾರೆ ನೋಡಿ..
ರಾಜ್ಯದಲ್ಲಿ ಶಿಕ್ಷಣ ಸಚಿವರು ಇದ್ದು ಇಲ್ಲದಂತಾಗಿದೆ!!
ವಿಜಯನಗರ: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಕಡಿಮೆಯಾಗಿದೆ… ವಿಜಯನಗರ ಜಿಲ್ಲೆ ಪ್ರಗತಿ ಪರೀಶಿಲನಾ ಸಭೆಯನ್ನು ಇವತ್ತು ಸಭೆ ನಡೆಸಿದ್ರು..
ಈ ಮಟ್ಟದ ಫಲಿತಾಂಶದ ಕಾರಣಕ್ಕಾಗಿ ಸಂಬಂಧಪಟ್ಟವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ? ಪ್ರತಿ ತಿಂಗಳ ಸಭೆಗಳ ಸಭೆಗಳಲ್ಲಿ ಏನು ಸೂಚನೆ ನೀಡಿದ್ದೀರಿ ಎಂದು CEO ಮತ್ತು ಜಿಲ್ಲಾಧಿಕಾರಿಗೆ ಪ್ರಶ್ನಿಸಿದರು.
ಶಿಕ್ಷಣ ವ್ಯವಸ್ಥೆ ಅತ್ಯಂತ ಕೆಟ್ಟಿದೆ. ಇದನ್ನು ಸರಿಯಾಗಿ ಸುಧಾರಿಸದಿದ್ದರೆ ಸಮಾಜಕ್ಕೆ ದೊಡ್ಡ ಅನ್ಯಾಯ ಮಾಡಿದಂತಾಗುತ್ತದೆ. ಮಕ್ಕಳ ಭವಿಷ್ಯ ಏನಾಗಬೇಕು? ಇದರಲ್ಲಿ ಮಕ್ಕಳ ತಪ್ಪಿಲ್ಲ. ಡಿಡಿಪಿಐ, ಬಿಇಒ ಮತ್ತು ಶಿಕ್ಷಕ ಸಮೂಹ ಇದರ ಹೊಣೆ ಹೊರಬೇಕಲ್ಲವೇ ಎಂದು ಪ್ರಶ್ನಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಿಗೆ ಎಷ್ಟು ಬಾರಿ ಭೇಟಿ ನೀಡಿದ್ದೀರಿ? ಶೈಕ್ಷಣಿಕ ವಾತಾವರಣ ಮತ್ತು ಊಟ, ವ್ಯವಸ್ಥೆಯ ಗುಣಮಟ್ಟವನ್ನು ಎಷ್ಟು ಬಾರಿ ಪರಿಶೀಲಿಸಿದ್ದೀರಿ? ರಾಜ್ಯ ಸರಾಸರಿಗೆ ಹೋಲಿಸಿದರೆ ಜಿಲ್ಲೆಯ ಹಾಸ್ಟೆಲ್ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕಡಿಮೆ ಆಗಿದ್ದು ಏಕೆ ? ಯಾವ ವಿಷಯಗಳಲ್ಲಿ ದುರ್ಬಲ ಇದೆ ಆ ವಿಷಯಗಳಲ್ಲಿ ಪ್ರತ್ಯೇಕ ಕೋಚಿಂಗ್ ವ್ಯವಸ್ಥೆ ಮಾಡಿದ್ದೀರಿ? ಎಷ್ಟು ಮಂದಿ ವಿದ್ಯಾರ್ಥಿಗಳು ರಾತ್ರಿ ಹಾಸ್ಟೆಲ್ಗಳಲ್ಲೇ ಉಳಿಯುತ್ತಾರೆ? ಎಂದು ಪ್ರಶ್ನಿಸಿ ಯಾವ ಯಾವ ಅಧಿಕಾರಿ ಯಾವ ಯಾವ ಹಾಸ್ಟೆಲ್ಗಳಲ್ಲಿ ಬೇಟಿ ನೀಡಿದ್ದೀರಿ ? ಭೇಟಿ ನೀಡಿದ್ದರೂ ಇನ್ನೂ ಸಮಸ್ಯೆಗಳು ಏಕೆ ಉಳಿದಿವೆ ಎಂದು ಪ್ರಶ್ನಿಸಿದರು.
ಎಸ್ಟಿ ಹಾಸ್ಟೆಲ್ಗಳಲ್ಲಿ, ಕ್ರೈಸ್ ಹಾಸ್ಟೆಲ್ಗಳಲ್ಲಿ ಅಗತ್ಯ ನಾಗರಿಕ ಸೌಲತ್ತುಗಳನ್ನು ಒದಗಿಸದ ಕಾರಣಕ್ಕೆ ಸಮಾಜ ಕಲ್ಯಾಣ ಇಲಾಖೆಯ ಡಿಡಿ ಮಂಜುನಾಥ್ ಅವರಿಗೆ ಲೋಕಾಯುಕ್ತ ದಿಂದ ನೋಟಿಸ್ ನೀಡಿರುವ ಪ್ರಕರಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಲೋಪಕ್ಕೆ ರಾಜ್ಯ ಮಟ್ಟದಲ್ಲೇ ಟೆಂಡರ್ ನೀಡುವುದರಿಂದ ಈ ಸಮಸ್ಯೆ ಆಗುತ್ತಿದೆ, ಜಿಲ್ಲೆಗಳಿಗೆ ಸರಬರಾಜು ಆಗುವಾಗ ಲೇಟಾಗುತ್ತಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಜಿಲ್ಲಾ ಮಟ್ಟದಲ್ಲೇ ಟೆಂಡರ್ ಕರೆದು ಸರಬರಾಜು ಮಾಡಲು ಅವಕಾಶ ಮಾಡಿಕೊಡುವ ಬಗ್ಗೆ ಪರಿಶೀಲನೆ ನಡೆಸಲು ಸಿಎಂ ಸೂಚಿಸಿದರು.