ನಾಳೆ ಒಂದು ದಿನ ರೆಡ್ ಅಲರ್ಟ್!!ಮುಂದಿನ ಎರಡು ದಿನ ಆರಂಜ್ ಅಲರ್ಟ್!!
ನಾಳೆ ಈ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ….
ದ.ಕ.ಜಿಲ್ಲೆಯ ಪ್ರಾಥಮಿಕ – ಪ್ರೌಢಶಾಲೆಗಳಿಗೆ ಜೂನ್ 27 ರಂದು ರಜೆ ಘೋಷಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ಜೂನ್ 27ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಗುರುವಾರ ಖಾಸಗಿ, ಅನುದಾನಿತ ಮತ್ತು ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೆ, ಜನರು ನೀರು ಇರುವ ತಗ್ಗು ಪ್ರದೇಶ, ನದಿ ತೀರ, ಕೆರೆಗಳ ಬಳಿ ತೆರಳದಂತೆ ಜಾಗ್ರತೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಹವಾಮಾನ ಇಲಾಖೆಯ ದಕ್ಷಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಿಸಿದ್ದು, 28, 29 ರಂದು ಆರೆಂಜ್ ಅಲರ್ಟ್ ಘೋಷಿಸಿದೆ.