ನಾಳೆ ಈ ಜಿಲ್ಲೆಯ ಎಲ್ಲ ಶಾಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ…
ಶಾಲೆಯ ಪಕ್ಕದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವು..!!
ಮಳೆ ನಿರಂತರವಾಗಿ ಸುರಿಯುತ್ತಿದೆ..ಎಚ್ಚರ ವಹಿಸಿ..
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ (School) ರಜೆ (Holiday) ಘೋಷಣೆ ಮಾಡಲಾಗಿದೆ.
ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಣೆ ಮಾಡಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನಾಳೆಯು ದಕ್ಷಿಣಕನ್ನಡ ಜಿಲ್ಲೆಗೆ ಹವಾಮಾನ ಇಲಾಖೆ (Weather Report) ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ.
ಎಲ್ಲೆಲ್ಲಿ ಏನಾಗಿದೆ?
ಮಂಗಳೂರಿನಲ್ಲಿ,ವಿದ್ಯುತ್ ತಂತಿ ತಲುಗಿ ಇಬ್ಬರು ಸಾವನ್ನಪ್ಪಿದ್ದು, ಮನೆ ಮೇಲೆ ಮಣ್ಣಿನ ದಿಬ್ಬ ಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಮಳೆಯಿಂದ ಜಿಲ್ಲೆಯ ನಾನಾ ಕಡೆಗಳಲ್ಲಿ ಅವಾಂತರ ಉಂಟಾಗಿದ್ದು,ಸೇತುವೆಯಿಂದ ಕಾರು ನದಿಗೆ ಬಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನೊಂದೆಡೆ ಕಾಸರಗೋಡಿನ ಮಧೂರು ದೇವಸ್ಥಾನ ಜಲಾವೃತಗೊಂಡಿದೆ.
ಮಂಗಳೂರಿನ, ರೊಸಾರಿಯೊ ಶಾಲೆಯ ಬಳಿ ವಿದ್ಯುತ್ ತಂತಿ ಸ್ಪರ್ಶಗೊಂಡು ಪುತ್ತೂರು ಹಾಗೂ ಸಕಲೇಶಪುರ ಮೂಲದ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟಿದ್ದಾರೆ. ಬೆಳಗ್ಗೆ ಜಾವ 4:30ರ ಸುಮಾರಿಗೆ ರಿಕ್ಷಾ ಸ್ವಚ್ಚಗೊಳಿಸಲೆಂದು ಹೊರಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ.