ಚಿಂಚಲಿ ಮಾಯಮ್ಮ ದೇವರ ದರ್ಶನ ಮುಗಿಸಿಕೊಂಡು ಮರಳಿ ಊರಿಗೆ ಹೊರಡುವ ಸಂದರ್ಭದಲ್ಲಿ ಹಾವೇರಿಯ ಬ್ಯಾಡಗಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.. ಸ್ಥಳದಳದಲ್ಲಿಯೇ 12 ಜನ ಮೃತ ಪಟ್ಟಿದ್ದಾರೆ…
ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಭಧ್ರಾವತಿಯವರು ಎಂದು ತಿಳಿದು ಬಂದಿದೆ..
ಮೃತ ಪಟ್ಟ 12 ಜನರಲ್ಲಿ
ಇಬ್ಬರು ಪುರುಷರು ಹಾಗೂ ಇಬ್ಬರು ಬಾಲಕರು ಉಳಿದ ಏಳು ಜನ ಮಹಿಳೆಯರು ಎಂದು ಮಾಹಿತಿ ಲಭಿಸಿದೆ..
ಬೆಳಗಾವಿಯಿಂದ ಭದ್ರಾವತಿಗೆ ಟಿಟಿ ವಾಹನ ಹೊರಟಿತ್ತು…
ಹಾವೇರಿ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ 12ಕ್ಕೂ ಅಧಿಕ ಮಂದಿ ದುರಂತ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸಂಭವಿಸಿದೆ.
ಟಿಟಿ ವಾಹನದಲ್ಲಿ 15ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತದೇಹಗಳು ಅಪ್ಪಚ್ಚಿಯಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಓರ್ವ ಬಾಲಕನಿಗೆ ಗಂಭೀರ ಗಾಯವಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇರುವ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ..