ರಾಜ್ಯದಲ್ಲಿ ಮುಂದುವರೆದ ಮುಂಗಾರು ಮಳೆಯ ಅಬ್ಬರ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇವತ್ತು ರಜೆ ನೀಡಲಾಗಿದೆ..
ಚಿಕ್ಕಮಗಳೂರು:
ಮೂಡಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮೂಡಗೆರೆ ತಹಶಿಲ್ದಾರ ಅವರು ಇವತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ..
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ.. ಮೂಡಗೆರೆ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಶಾಲೆಗಳಿಗೆ ರಜೆ ನೀಡಲಾಗಿದೆ..