ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ಅಧಿಕಾರಿ ಸಾವು
ಚಾಮರಾಜನಗರದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ಅಧಿಕಾರಿಗಳ ಬೈಕ್ ಅಪಘಾತಕ್ಕೀಡಾಗಿದೆ. ಇಂದು ಜೂನ್ 28) ಇಂದು ಗುಂಡ್ಲುಪೇಟೆ ತಾಲೂಕಿನ ಹಂಗಲ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುವ ವೇಳೆ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ (54) ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಹಾರ ಇಲಾಖೆ ಶಿರಸ್ತಿದಾರ ರಮೇಶ್ ಗೆ ಗಂಭೀರ ಗಾಯಗಳಾಗಿವೆ.
ಗುಂಡ್ಲುಪೇಟೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳು. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿದ್ದು, ಗಾಯಾಳು ರಮೇಶ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.