ಪ್ರಸುತ ಶಿಕ್ಷಕರ ವರ್ಗಾವಣೆಯಲ್ಲಿ ಆಗಿರುವ ಲೋಪದೋಶಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಮಾನ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮನವಿ ಸಲ್ಲಿಕೆ..
2024-25 ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ವಲಯ ವರ್ಗಾವಣೆ ಕೈಗೊಳ್ಳುವಂತೆ ವಿನಂತಿಸಲಾಯಿತು..
ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡುವುದಾಗಿ ಭರವಸೆ ನೀಡಿದ ಶಿಕ್ಷಣ ಸಚಿವರು
ಗೆ,
ಮಾನ್ಯ ಶ್ರೀ ಮಧು ಬಂಗಾರಪ್ಪನವರು
ಮಾನ್ಯ ಸಚಿವರು ಪ್ರಾಥಮಿಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ,
ಕರ್ನಾಟಕ ಸರಕಾರ ಬೆಂಗಳೂರು.
ಮಾನ್ಯರೇ,
ವಿಷಯ:- 2024-25 ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ವಲಯ ವರ್ಗಾವಣೆ ಕೈಗೊಳ್ಳಲು ಮನವಿ..
ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ ರಿ ಹುಬ್ಬಳ್ಳಿ ವತಿಯಿಂದ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ,
ಕರ್ನಾಟಕ ಶಿಕ್ಷಕರ ವರ್ಗಾವಣೆ ಮತ್ತು ನಿಯಂತ್ರಣ ಕಾಯ್ದೆ 2007 ತಿದ್ದುಪಡಿ ಅಧಿನಿಯಮ 2022 ಒಂದು ವರ್ಷ ಹೆಚ್ಚುವರಿ ವರ್ಗಾವಣೆ ನಂತರದ ವರ್ಷ ವಲಯ ವರ್ಗಾವಣೆ ನಡೆಸುವುದು ಎಂದು ಹೇಳುತ್ತದೆ ಕಳೆದ ವರ್ಷ ಹೆಚ್ಚುವರಿ ವರ್ಗಾವಣೆ ಮಾಡಿರುವುದರಿಂದ ಈ ವರ್ಷ ವಲಯ ವರ್ಗಾವಣೆ ಮಾಡಬೇಕು ಆದರೆ ಈ ವರ್ಷದ ವರ್ಗಾವಣೆಯಲ್ಲಿ ವಲಯ ವರ್ಗಾವಣೆ ಕೈಬಿಟ್ಟಿರುವುದು ದುರದೃಷ್ಟಕರ.
ಕಳೆದ ವರ್ಷ ಹೆಚ್ಚುವರಿ ವರ್ಗಾವಣೆಯೂ ಕೂಡ ಶೈಕ್ಷಣಿಕ ವರ್ಷದ ಮಧ್ಯದಲ್ಲಿಯೇ ನಿಯಮಾನುಸಾರ ಮಾಡಿದ ಅಧಿಕಾರಿಗಳು ಈ ವರ್ಷ ವಲಯ ವರ್ಗಾವಣೆಗೆ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಬೇಡ ಎಂದು ಹೇಳುತ್ತಿರುವುದು ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರ ನೋವಿಗೆ ಕಾರಣವಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮನೆ ಬಾಡಿಗೆ ಭತ್ಯೆ ಕಡಿಮೆ ಹಾಗೂ ಗ್ರಾಮೀಣ ಪರಿಹಾರ ಭತ್ಯೆ ಕೂಡ ಇಲ್ಲ ಹೀಗಾಗಿ ನಗರ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರು ಗ್ರಾಮೀಣ ಪ್ರದೇಶಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ.
ನಮ್ಮ ಸಂಘದ ವತಿಯಿಂದ ಕಳೆದ ಐದು ವರ್ಷಗಳಿಂದ ನಿರಂತರವಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಗ್ರಾಮೀಣ ಪರಿಹಾರ ಭತ್ಯೆ ನೀಡಲು ನಿರಂತರ ಹಕ್ಕೋತ್ತಾಯ ಮಾಡಿದರು ಸರ್ಕಾರ ನಮ್ಮ ಕಡೆ ತಿರುಗಿಯೂ ನೋಡುತ್ತಿಲ್ಲ ಸಮಾನ ಕೆಲಸಕ್ಕೆ ಸಮಾನ ವೇತನ ಇಲ್ಲದೆ ಗ್ರಾಮೀಣ ಪ್ರದೇಶದ ಶಿಕ್ಷಕರು ಅನ್ಯಾಯಕ್ಕೆ ಒಳಗಾಗಿದ್ದಾರೆ.
ಕರ್ನಾಟಕ ಶಿಕ್ಷಕರ ವರ್ಗಾವಣೆ ಮತ್ತು ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಗಾಳಿಗೆ ತೂರಿ ವಲಯ ವರ್ಗಾವಣೆ ಬಿಟ್ಟು ಕೇವಲ ಸಾಮಾನ್ಯ ವರ್ಗಾವಣೆ ಮಾಡುತ್ತಿರುವುದು ಗ್ರಾಮೀಣ ಶಿಕ್ಷಕರ ಮೇಲೆ ಗದಾ ಪ್ರಹಾರ ಮಾಡಿದ ಹಾಗೆ ಆಗುತ್ತಿದೆ.
ಆದ್ದರಿಂದ ಮಾನ್ಯರವರು ನಿಯಮಾನುಸಾರ ಈ ವರ್ಷ ವಲಯ ವರ್ಗಾವಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ವಿನಂತಿಸಿಕೊಳ್ಳುತ್ತೇವೆ ಎಂದು ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾದ್ಯಕ್ಷರಾದ ಶರಣಪ್ಪಗೌಡ ಆರ್ ಕೆ, ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಹಾಲೇಶ ನವುಲೆ ಪ್ರಮುಖರಾದ ಮಲ್ಲಿಕಾರ್ಜುನ ಉಪ್ಪಿನ ಎಲ್ ಐ ಲಕ್ಕಮ್ಮನವರ ಮಹ್ಮದರಫಿ ಕೆ ಕೊಟ್ರತ್ಯ, ಸಿದ್ದಣ್ಣ ಉಕ್ಕಲಿ, ಹನುಮಂತಪ್ಪ ಮೇಟಿ, ಅಕ್ಬರಲಿ ಸೋಲಾಪುರ, ಎಸ್ ಎಫ್ ಪಾಟೀಲ ಆರ್ ನಾರಾಯಣಸ್ವಾಮಿ, ಡಿ ಎಸ್ ಭಜಂತ್ರಿ, ಸುರೇಶ ಗೆಜ್ಜೂರಿ ಎಂ ಬಿ ಯಾದೂಸಾಬನವರ, ಎಚ್ ಕೆ ಹಲವಾಗಲಿ, ಸೋಮಶೇಖರ್ ಎಂ ಎನ್ ಶ್ರೀನಿವಾಸ,